ವರದಾ-ಬೇಡ್ತಿ ನದಿ ಪ್ರಾಜೆಕ್ಟ್ ಖಂಡಿಸಿ ಬೃಹತ್ ಪ್ರತಿಭಟನೆ: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದಲ್ಲಿ ಹರಿಯುವ ಅಘನಾಶಿನಿ-ಬೇಡ್ತಿ ನದಿ ತಿರುವು ಮಾಡಲು ಸರ್ಕಾರ ಮುಂದಾಗಿದೆ. ಈ ಯೋಜನೆಗಳು ಇಡೀ ಜಿಲ್ಲೆಗೆ ಮಾರಕ ಎಂದು ಜಿಲ್ಲೆಯ ಜನರು ಹೋರಾಟಕ್ಕೆ ಮುಂದಾಗಿದ್ದು, ಜಿಲ್ಲೆಯ ಶಿರಸಿಯಲ್ಲಿ ಜನ ಸಮಾವೇಶ ಮೂಲಕ ಸಾವಿರಾರು ಜನರು ಸೇರಿ ಸರ್ಕಾರದ ನಡೆ ವಿರೋಧಿಸಿದ್ದಾರೆ. ಇಂದು (ಜನವರಿ 11) ಶಿರಸಿಯ ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸ್ವಾಮಿಗಳ ನೇತೃತ್ವದಲ್ಲಿ ಹೋರಾಟ ನಡೆದಿದ್ದು, ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿಗಳು, ಮಠಾಧೀಶರು ಸೇರಿದಂತೆ ಸಾವಿರಾರು ಜನರು ಒಂದೆಡೆ ಸೇರಿ ಒಕ್ಕೊರಲಿನಿಂದ ಯೋಜನೆಗೆ ವಿರೋಧ ವ್ಯಕ್ತಪಡಿಸಲಾಯಿತು.
ಶಿರಸಿ, (ಜನವರಿ 11) : ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದಲ್ಲಿ ಹರಿಯುವ ಅಘನಾಶಿನಿ-ಬೇಡ್ತಿ ನದಿ ತಿರುವು ಮಾಡಲು ಸರ್ಕಾರ ಮುಂದಾಗಿದೆ. ಈ ಯೋಜನೆಗಳು ಇಡೀ ಜಿಲ್ಲೆಗೆ ಮಾರಕ ಎಂದು ಜಿಲ್ಲೆಯ ಜನರು ಹೋರಾಟಕ್ಕೆ ಮುಂದಾಗಿದ್ದು, ಜಿಲ್ಲೆಯ ಶಿರಸಿಯಲ್ಲಿ ಜನ ಸಮಾವೇಶ ಮೂಲಕ ಸಾವಿರಾರು ಜನರು ಸೇರಿ ಸರ್ಕಾರದ ನಡೆ ವಿರೋಧಿಸಿದ್ದಾರೆ. ಇಂದು (ಜನವರಿ 11) ಶಿರಸಿಯ ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸ್ವಾಮಿಗಳ ನೇತೃತ್ವದಲ್ಲಿ ಹೋರಾಟ ನಡೆದಿದ್ದು, ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿಗಳು, ಮಠಾಧೀಶರು ಸೇರಿದಂತೆ ಸಾವಿರಾರು ಜನರು ಒಂದೆಡೆ ಸೇರಿ ಒಕ್ಕೊರಲಿನಿಂದ ಯೋಜನೆಗೆ ವಿರೋಧ ವ್ಯಕ್ತಪಡಿಸಲಾಯಿತು.
ಇನ್ನು ಈ ಸಮಾವೇಶದಲ್ಲಿ ಸಮಾವೇಶದಲ್ಲಿ ಯೋಜನೆಯಿಂದ ಆಗುವ ಅಪಾಯದ ಬಗ್ಗೆ ಸಾರ್ವಜನಿಕರಿಗೆ ತಿಳಿಸಲಾಯಿತು. ಅಲ್ಲದೇ ಜಿಲ್ಲೆಯಲ್ಲಿ ಈ ಯೋಜನೆ ವಿರುದ್ದ ಯಾವುದೇ ರಾಜಕೀಯ ಬೆರಸದೇ ಒಕ್ಕೊರಲಿನ ಹೋರಾಟ ಮಾಡಲು ನಿರ್ಣಯ ತೆಗೆದುಕೊಳ್ಳಲಾಯಿತು.
ಇದನ್ನೂ ನೋಡಿ: ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಖಡಕ್ ಎಚ್ಚರಿಕೆ
ಇನ್ನು ಇದೇ ವೇಳೆ ರಾಜಕೀಯ ಆರೋಪ ಪ್ರತ್ಯಾರೋಪ ಸಹ ನಡೆಯಿತು. ಈ ಯೋಜನೆ ಯಡಿಯೂರಪ್ಪ ಸಿಎಂ ಆಗಿದ್ದಾಗಲೇ ಬಜೆಟ್ ನಲ್ಲಿ ಮಂಡನೆ ಮಾಡಿದ್ದು ಆಗ ಈಗಿನ ಸಂಸದರು ಸ್ಪೀಕರ್ ಆಗಿದ್ದರು ವಿರೋಧಿಸಿಲ್ಲ ಎಂದು ಸಚಿವ ಮಂಕಾಳ ವೈದ್ಯ ಅವರು ಕಾಗೇರಿ ವಿರುದ್ಧ ಆರೋಪಿಸಿದರು. ಬಳಿಕ ಮಾತನಾಡಿದ ಕಾಗೇರಿ ಇದಕ್ಕೆ ಪರೋಕ್ಷವಾಗಿ ಟಾಂಗ್ ಕೊಟ್ಟು ತಮ್ಮ ನಿಲುವು ಸ್ಪಷ್ಟಪಡಿಸಿದರು. ಇನ್ನು ಇದೇ ವೇಳೆ ರಾಜಕೀಯ ನಾಯಕರು ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ನೋಡಿ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್

