ಗೃಹ ಸಚಿವ ಪರಮೇಶ್ವರ ಆಪ್ತನ ಹತ್ಯೆ ಯತ್ನ: ಚಾಕುವಿನಿಂದ ಚುಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Edited By:

Updated on: Mar 30, 2026 | 8:01 PM

ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಆಪ್ತರಾಗಿರುವ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ್ ಅವರ ಮೇಲೆ ಅಂಕೋಲಾದಲ್ಲಿ ನಡೆದ ಹತ್ಯೆ ಯತ್ನ ಪ್ರಕರಣ ಜಿಲ್ಲೆಯಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದೆ. ಮಾರ್ಚ್ 25ರಂದು ಹಾಡಹಗಲೇ ನಡೆದ ಈ ದಾಳಿ ರಾಜಕೀಯ ವಲಯದಲ್ಲೂ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್ನು ಘಟನೆಯ‌ ಇನ್ನೊಂದು ಸಿಸಿಟಿವಿ ವಿಡಿಯೋ ವೈರಲ್ ಆಗಿದ್ದು, ಆರೋಪಿಗಳು ಗೋಪಾಲ ಕೃಷ್ಣ ನಾಯಕ್ ಅವರ ತಲೆಗೆ ಹಲವು ಬಾರಿ ಚಾಕುವಿನಿಂದ ಚುಚ್ಚುವ ದೃಶ್ಯ ಸೆರೆಯಾಗಿದೆ.

ಕಾರವಾರ, (ಮಾರ್ಚ್ 30): ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಆಪ್ತರಾಗಿರುವ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ್ ಅವರ ಮೇಲೆ ಅಂಕೋಲಾದಲ್ಲಿ ನಡೆದ ಹತ್ಯೆ  ಯತ್ನ ಪ್ರಕರಣ (Gopalkrishna Nayak Murder Attempt) ಜಿಲ್ಲೆಯಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದೆ. ಮಾರ್ಚ್ 25ರಂದು ಹಾಡಹಗಲೇ ನಡೆದ ಈ ದಾಳಿ ರಾಜಕೀಯ ವಲಯದಲ್ಲೂ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್ನು ಘಟನೆಯ‌ ಇನ್ನೊಂದು ಸಿಸಿಟಿವಿ ವಿಡಿಯೋ ವೈರಲ್ ಆಗಿದ್ದು, ಆರೋಪಿಗಳು ಗೋಪಾಲ ಕೃಷ್ಣ ನಾಯಕ್ ಅವರ ತಲೆಗೆ ಹಲವು ಬಾರಿ ಚಾಕುವಿನಿಂದ ಚುಚ್ಚುವ ದೃಶ್ಯ ಸೆರೆಯಾಗಿದೆ. ಘಟನೆ ಸಂಬಂಧ ಸದ್ಯ ಗೋವಾ ಮೂಲದ ಏಳಕ್ಕೂ ಹೆಚ್ಚು ಆರೋಪಿ ಬಂದಿಸಿರುವ ಪೊಲೀಸರು, ಸುಪಾರಿ ಕೊಟ್ಟ ಆರೋಪಿಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಮುಖಂಡನ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

Published on: Mar 30, 2026 07:31 PM
Follow Us
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More