ಉತ್ತರ ಕನ್ನಡ ಜಿಲ್ಲೆಯಲ್ಲಿ 9 ಕಡೆ ಅತಿ ಹೆಚ್ಚು ಉಷ್ಣಾಂಶ ದಾಖಲು: ಡಿಸಿ ಹೇಳಿದ್ದಿಷ್ಟು
ಉತ್ತರ ಕನ್ನಡ ಜಿಲ್ಲೆಯಲ್ಲಿ 9 ಸ್ಥಳಗಳಲ್ಲಿ ಅತಿ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಮುಂದಿನ ಮೂರು ದಿನಗಳ ಕಾಲ ತೀವ್ರ ಬಿಸಿಲಿಗೆ ಎಚ್ಚರಿಕೆ ನೀಡಿದ್ದಾರೆ. ಮಧ್ಯಾಹ್ನದ ವೇಳೆ ಮನೆಯಿಂದ ಹೊರಗೆ ಹೋಗದಿರಲು, ಬಿಸಿಲಿನಿಂದ ರಕ್ಷಿಸಿಕೊಳ್ಳಲು ಛತ್ರಿ ಮತ್ತು ಟೋಪಿ ಧರಿಸಲು ಮನವಿ ಮಾಡಿದ್ದಾರೆ. ಯಾವುದೇ ತೊಂದರೆ ಎದುರಾದರೆ 1077 ಗೆ ಕರೆ ಮಾಡಲು ಸೂಚಿಸಲಾಗಿದೆ.
ಕಾರವಾರ, ಮಾರ್ಚ್ 03: ಉತ್ತರ ಕನ್ನಡ ಜಿಲ್ಲೆಯಲ್ಲಿ 9 ಕಡೆ ಅತಿ ಹೆಚ್ಚು ಉಷ್ಣಾಂಶ (heatwave) ದಾಖಲಾಗಿದೆ. 3 ದಿನಗಳ ಕಾಲ ಬಿಸಿ ಗಾಳಿ ಇರುತ್ತೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಾಲೂಕಿನ ಸಾವಂತವಾಡ ಗ್ರಾಮದಲ್ಲಿ ಅತಿ ಹೆಚ್ಚು ಉಷ್ಣಾಂಶ ದಾಖಲಾಗಿದೆ. 4 ದಿನಗಳ ಹಿಂದೆ ಸಾವಂತವಾಡದಲ್ಲಿ 41.3 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದಿದ್ದಾರೆ. ಜಿಲ್ಲೆಯಲ್ಲಿ ಎಲ್ಲಾದ್ರೂ ಸಮಸ್ಯೆ ಕಂಡು ಬಂದರೆ 1077ಕ್ಕೆ ಕರೆ ಮಾಡಿ ಎಂದು ತಿಳಿಸಿದ್ದಾರೆ. ಜಿಲ್ಲೆಯ ಜನರು ಎರಡು ದಿನ ಹೆಚ್ಚಿನ ಮುನ್ನೆಚ್ಚರಿಕೆ ಕೈಗೊಳ್ಳಬೇಕು. ಮಧ್ಯಾಹ್ನದ ವೇಳೆಯಲ್ಲಿ ಮನೆಯಿಂದ ಹೊರ ಹೋಗದಂತೆ. ಒಂದು ಹೊರಗಡೆ ಹೋದರು ಛತ್ರಿ, ಟೋಪಿ ಧರಿಸುವಂತೆ ಸೂಚನೆ ನೀಡಲಾಗಿದ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.