AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch Video: ಕಾರವಾರ ಬೈತ್‌ಕೋಲ್​​ನಲ್ಲಿ ಗುಡ್ಡ ಕುಸಿತ, ಮನೆಗಳಿಗೆ ನುಗ್ಗಿದ ನೀರು

Watch Video: ಕಾರವಾರ ಬೈತ್‌ಕೋಲ್​​ನಲ್ಲಿ ಗುಡ್ಡ ಕುಸಿತ, ಮನೆಗಳಿಗೆ ನುಗ್ಗಿದ ನೀರು

ಗಣಪತಿ ಶರ್ಮಾ
|

Updated on: Jun 24, 2023 | 6:25 PM

Share

ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ವರುಣನ ಅಬ್ಬರ ಮುಂದುವರಿದೆ. ಭಟ್ಕಳ, ಅಂಕೋಲ, ಜೋಯಿಡಾ, ಕಾರವಾರ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ.

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದೆ. ಕಾರವಾರ (Karawar) ತಾಲೂಕಿನ ಬೈತ್‌ಕೋಲ್​​ನಲ್ಲಿ ಗುಡ್ಡ ಕುಸಿದು ಮನೆಗಳಿಗೆ ಮಳೆ (Rain) ನೀರು ನುಗ್ಗಿದೆ. ಗುಡ್ಡದ ಮೇಲಿಂದ ಹರಿದು ಬರುತ್ತಿರುವ ಮಳೆ ನೀರು ಮನೆಗಳಿಗೆ ನುಗ್ಗಿದೆ. ಗುಡ್ಡ ಕೊರೆದು ನೆವಿ ರಸ್ತೆ ನಿರ್ಮಿಸುತ್ತಿದ್ದುದರಿಂದ ಹೀಗಾಗಿದೆ ಎನ್ನಲಾಗಿದೆ. ಜೆಸಿಬಿ ಮೂಲಕ ರಸ್ತೆ ಮೇಲಿನ ಕಲ್ಲುಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಈ ಮಧ್ಯೆ, ಜಿಲ್ಲೆಯ ಹಲವೆಡೆ ವರುಣನ ಅಬ್ಬರ ಮುಂದುವರಿದೆ. ಭಟ್ಕಳ, ಅಂಕೋಲ, ಜೋಯಿಡಾ, ಕಾರವಾರ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ.

ಮಳೆಯ ಕಾರಣ ಸಮುದ್ರ ತೀರಕ್ಕೆ ಮೀನುಗಾರರು, ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಇನ್ನೂ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಮಧ್ಯೆ, ಧಾರಾಕಾರ ಮಳೆಗೆ ಕಾರವಾರ ಸಮೀಪ ಬಸ್ಸೊಂದು ಕೆಸರಿನಲ್ಲಿ ಸಿಲುಕಿದೆ. ಕಡವಾಡ ದರ್ಗಾ ಬಳಿ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪ್ರಯಾಣಿಕರು ಬಸ್​ನಿಂದ ಇಳಿದು ಬೇರೆ ವಾಹನದಲ್ಲಿ ತೆರಳಿದ್ದಾರೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More