Watch Video: ಕಾರವಾರ ಬೈತ್ಕೋಲ್ನಲ್ಲಿ ಗುಡ್ಡ ಕುಸಿತ, ಮನೆಗಳಿಗೆ ನುಗ್ಗಿದ ನೀರು
ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ವರುಣನ ಅಬ್ಬರ ಮುಂದುವರಿದೆ. ಭಟ್ಕಳ, ಅಂಕೋಲ, ಜೋಯಿಡಾ, ಕಾರವಾರ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ.
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದೆ. ಕಾರವಾರ (Karawar) ತಾಲೂಕಿನ ಬೈತ್ಕೋಲ್ನಲ್ಲಿ ಗುಡ್ಡ ಕುಸಿದು ಮನೆಗಳಿಗೆ ಮಳೆ (Rain) ನೀರು ನುಗ್ಗಿದೆ. ಗುಡ್ಡದ ಮೇಲಿಂದ ಹರಿದು ಬರುತ್ತಿರುವ ಮಳೆ ನೀರು ಮನೆಗಳಿಗೆ ನುಗ್ಗಿದೆ. ಗುಡ್ಡ ಕೊರೆದು ನೆವಿ ರಸ್ತೆ ನಿರ್ಮಿಸುತ್ತಿದ್ದುದರಿಂದ ಹೀಗಾಗಿದೆ ಎನ್ನಲಾಗಿದೆ. ಜೆಸಿಬಿ ಮೂಲಕ ರಸ್ತೆ ಮೇಲಿನ ಕಲ್ಲುಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಈ ಮಧ್ಯೆ, ಜಿಲ್ಲೆಯ ಹಲವೆಡೆ ವರುಣನ ಅಬ್ಬರ ಮುಂದುವರಿದೆ. ಭಟ್ಕಳ, ಅಂಕೋಲ, ಜೋಯಿಡಾ, ಕಾರವಾರ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ.
ಮಳೆಯ ಕಾರಣ ಸಮುದ್ರ ತೀರಕ್ಕೆ ಮೀನುಗಾರರು, ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಇನ್ನೂ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಮಧ್ಯೆ, ಧಾರಾಕಾರ ಮಳೆಗೆ ಕಾರವಾರ ಸಮೀಪ ಬಸ್ಸೊಂದು ಕೆಸರಿನಲ್ಲಿ ಸಿಲುಕಿದೆ. ಕಡವಾಡ ದರ್ಗಾ ಬಳಿ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪ್ರಯಾಣಿಕರು ಬಸ್ನಿಂದ ಇಳಿದು ಬೇರೆ ವಾಹನದಲ್ಲಿ ತೆರಳಿದ್ದಾರೆ.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ