‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ

Updated on: Jun 19, 2025 | 7:50 PM

ಜನರು ತುಂಬಾ ನಿರೀಕ್ಷೆ ಇಟ್ಟುಕೊಂಡಿದ್ದ ‘ಉತ್ತರಕಾಂಡ’ ಚಿತ್ರದ ಶೂಟಿಂಗ್ ಸದ್ಯಕ್ಕೆ ನಿಂತಿವೆ. ಅದಕ್ಕೆ ಕಾರಣವೇನು ಎಂಬುದನ್ನು ನಿರ್ದೇಶಕ ರೋಹಿತ್ ಪದಕಿ ಹಾಗೂ ನಿರ್ಮಾಪಕ ಕಾರ್ತಿಕ್ ಗೌಡ ಅವರು ವಿವರಿಸಿದ್ದಾರೆ. ಈ ಚಿತ್ರದ ಪಾತ್ರವರ್ಗದಲ್ಲಿ ಡಾಲಿ ಧನಂಜಯ, ಶಿವರಾಜ್​ಕುಮಾರ್ ಮುಂತಾದವರಿಗೆ ಪ್ರಮುಖ ಪಾತ್ರವಿದೆ.

ಪ್ರೇಕ್ಷಕರು ಸಖತ್ ನಿರೀಕ್ಷೆ ಇಟ್ಟುಕೊಂಡಿದ್ದ ‘ಉತ್ತರಕಾಂಡ’ (Uttarakaanda) ಸಿನಿಮಾದ ಕೆಲಸಗಳು ಸದ್ಯಕ್ಕೆ ನಿಂತಿವೆ. ಅದಕ್ಕೆ ಕಾರಣ ಏನು ಎಂಬುದನ್ನು ನಿರ್ದೇಶಕ ರೋಹಿತ್ ಪದಕಿ (Rohith Padaki) ಮತ್ತು ನಿರ್ಮಾಪಕ ಕಾರ್ತಿಕ್ ಗೌಡ ವಿವರಿಸಿದ್ದಾರೆ. ಈ ಸಿನಿಮಾದ ಪಾತ್ರವರ್ಗದಲ್ಲಿ ಶಿವರಾಜ್​ಕುಮಾರ್ (Shivarajkumar), ಡಾಲಿ ಧನಂಜಯ ಮುಂತಾದವರಿಗೆ ಪ್ರಮುಖ ಪಾತ್ರವಿದೆ. ಶಿವರಾಜ್​ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಎದುರಾಗಿದ್ದರಿಂದ ಶೂಟಿಂಗ್​ಗೆ ಬ್ರೇಕ್ ನೀಡಲಾಯಿತು ಎಂದು ರೋಹಿತ್ ಪದಕಿ ಮತ್ತು ಕಾರ್ತಿಕ್ ಗೌಡ ಹೇಳಿದ್ದಾರೆ. ‘ಶಿವಣ್ಣ ಅವರ ಆ್ಯಕ್ಷನ್ ಸನ್ನಿವೇಶಗಳು ಈ ಸಿನಿಮಾದಲ್ಲಿ ಜಾಸ್ತಿ ಇವೆ. ಹಾಗಾಗಿ ಅವರಿಗೆ ಸಮಯ ನೀಡಬೇಕು. ಅವರ ಜೊತೆ ಮಾತುಕತೆ ಮಾಡಿ ಮುಂದಿನ ಶೂಟಿಂಗ್ ಬಗ್ಗೆ ನಿರ್ಧಾರ ಮಾಡಬೇಕು’ ಎಂದು ರೋಹಿತ್ ಪದಕಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More