ಉತ್ತರಾಖಂಡದ ಪಿಥೋರಗಢದ ಸೇತುವೆಯಿಂದ ಉರುಳಿದ ಬೊಲೆರೋ; 8 ಜನ ಸಾವು, ಹಲವರಿಗೆ ಗಾಯ
ಉತ್ತರಾಖಂಡದ ಮುವಾನಿ ಪಟ್ಟಣದ ಸುನಿ ಸೇತುವೆ ಬಳಿ ಸಂಭವಿಸಿದ ವಾಹನ ಅಪಘಾತವು ಸ್ಥಳೀಯ ನಿವಾಸಿಗಳಲ್ಲಿ ಭೀತಿಯನ್ನು ಉಂಟುಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡ ಎಲ್ಲಾ ಪ್ರಯಾಣಿಕರು ಪ್ರಸ್ತುತ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಬೊಲೆರೊ ನಿಯಂತ್ರಣ ತಪ್ಪಿ ಆಳವಾದ ಕಂದರಕ್ಕೆ ಬೀಳಲು ಕಾರಣವಾದ ಸಂದರ್ಭಗಳನ್ನು ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ.
ನವದೆಹಲಿ, ಜುಲೈ 15: ಉತ್ತರಾಖಂಡದ (Uttarakhand Accident) ಪಿಥೋರಗಢ ಜಿಲ್ಲೆಯ ಮುವಾನಿ ಪಟ್ಟಣದ ಸುನಿ ಸೇತುವೆ (Suni Bridge) ಬಳಿ ಇಂದು 13 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬೊಲೆರೊ ವಾಹನವು 150 ಮೀಟರ್ ಆಳದ ಕಂದಕಕ್ಕೆ ಉರುಳಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 8 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರ ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಜೀವಹಾನಿಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ತಮ್ಮ ಸಂತಾಪ ಸೂಚಿಸಿದ್ದಾರೆ. ಪರಿಹಾರ ಪ್ರಯತ್ನಗಳನ್ನು ವೇಗಗೊಳಿಸಲು ಮತ್ತು ಎಲ್ಲಾ ಗಾಯಾಳುಗಳಿಗೆ ಸಕಾಲಿಕ ಮತ್ತು ಉಚಿತ ವೈದ್ಯಕೀಯ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಲು ಅವರು ಜಿಲ್ಲಾ ಅಧಿಕಾರಿಗಳು ಮತ್ತು ರಕ್ಷಣಾ ತಂಡಗಳಿಗೆ ನಿರ್ದೇಶನ ನೀಡಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ