Uttarakhand Accident: ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ಭಿಕಿಯಾಸೈನ್ ಬಳಿ ಹಲವು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಆಳವಾದ ಕಂದಕಕ್ಕೆ ಉರುಳಿದೆ. ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿರುವ ಕುರಿತು ಮಾಹಿತಿ ಲಭ್ಯವಾಗಿದೆ. ದುರಂತದ ಬಗ್ಗೆ ಮಾಹಿತಿ ಬಂದ ಕೂಡಲೇ ಎಸ್‌ಡಿಆರ್‌ಎಫ್‌ನಿಂದ ರಕ್ಷಣಾ ತಂಡಗಳನ್ನು ಅಪಘಾತ ಸ್ಥಳಕ್ಕೆ ರವಾನಿಸಲಾಯಿತು.
ಡೆಹ್ರಾಡೂನ್, ಡಿಸೆಂಬರ್ 30: ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ಭಿಕಿಯಾಸೈನ್ ಬಳಿ ಹಲವು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಆಳವಾದ ಕಂದಕಕ್ಕೆ ಉರುಳಿದೆ. ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿರುವ ಕುರಿತು ಮಾಹಿತಿ ಲಭ್ಯವಾಗಿದೆ. ದುರಂತದ ಬಗ್ಗೆ ಮಾಹಿತಿ ಬಂದ ಕೂಡಲೇ ಎಸ್‌ಡಿಆರ್‌ಎಫ್‌ನಿಂದ ರಕ್ಷಣಾ ತಂಡಗಳನ್ನು ಅಪಘಾತ ಸ್ಥಳಕ್ಕೆ ರವಾನಿಸಲಾಯಿತು.
ಗಾಯಾಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಭಿಕಿಯಾಸೈನ್‌ನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ದುಃಖ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದು, ಗಾಯಾಳುಗಳಿಗೆ ಅಗತ್ಯ ನೆರವು ನೀಡಲಾಗುತ್ತಿದೆ ಎಂದು ಸಿಎಂ ಧಾಮಿ ಹೇಳಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ