ಉತ್ತರಾಖಂಡದಲ್ಲಿ ಮೇಘಸ್ಫೋಟ, ಭೂಕುಸಿತದಿಂದ 4 ಜನ ಸಾವು

Updated on: Aug 29, 2025 | 7:08 PM

ಉತ್ತರಾಖಂಡದ ಹಲವು ಜಿಲ್ಲೆಗಳಲ್ಲಿ ಇಂದು ಸಂಭವಿಸಿದ ಮೇಘಸ್ಫೋಟದಿಂದಾಗಿ ಹಲವಾರು ಕುಟುಂಬಗಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿವೆ. ಈ ಪ್ರಕರಣದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ. ರುದ್ರಪ್ರಯಾಗದಲ್ಲಿ ಸಂಭವಿಸಿದ ಮೇಘಸ್ಫೋಟದ ವೀಡಿಯೊವು ಬಸುಕೇದಾರ್ ತಹಸಿಲ್‌ನ ಬರೇತ್ ತಲ್ಜಮಾನ್‌ನಲ್ಲಿನ ಪ್ರದೇಶದಾದ್ಯಂತ ಮಣ್ಣು ಮತ್ತು ಶಿಲಾಖಂಡರಾಶಿಗಳನ್ನು ತೋರಿಸಿದೆ.

ಉತ್ತರಾಖಂಡ, ಆಗಸ್ಟ್ 29: ಇಂದು ಮುಂಜಾನೆ ಉತ್ತರಾಖಂಡದ (Uttarakhand Floods) ಹಲವು ಜಿಲ್ಲೆಗಳಲ್ಲಿ ಮೇಘಸ್ಫೋಟದಿಂದ 4 ಜನರು ಸಾವನ್ನಪ್ಪಿದ್ದಾರೆ, ಇಬ್ಬರು ಕಾಣೆಯಾಗಿದ್ದಾರೆ. ಈ ಘಟನೆಯಲ್ಲಿ ಹಲವಾರು ಕುಟುಂಬಗಳು ಅವಶೇಷಗಳ ಕೆಳಗೆ ಸಿಲುಕಿಕೊಂಡಿವೆ. ಇದಾದ ನಂತರದ ಭೂಕುಸಿತದಿಂದ ಸುಮಾರು 40 ಕುಟುಂಬಗಳು ಅವಶೇಷಗಳ ಅಡಿಯಲ್ಲಿ ಸಮಾಧಿಯಾಗಿವೆ. ಅವರ ಮೃತದೇಹಗಳಿಗಾಗಿ ಶೋಧ ಕಾರ್ಯಾಚರಣೆ ನಡೆದಿದೆ. ಉತ್ತರಾಖಂಡದಲ್ಲಿ ಚಮೋಲಿ, ರುದ್ರಪ್ರಯಾಗ, ತೆಹ್ರಿ ಮತ್ತು ಬಾಗೇಶ್ವರ್ ನೈಸರ್ಗಿಕ ವಿಕೋಪದಿಂದ ತೀವ್ರವಾಗಿ ಹಾನಿಗೊಳಗಾದ ಜಿಲ್ಲೆಗಳಲ್ಲಿ ಸೇರಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ