60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಮಸೀದಿ ಮೇಲೆ ಕಲ್ಲು ತೂರಾಟ

Updated on: May 02, 2025 | 9:02 AM

ಉತ್ತರಾಖಂಡದ ನೈನಿತಾಲ್​ನಲ್ಲಿ 12 ವರ್ಷದ ಬಾಲಕಿ ಮೇಲೆ 60 ವರ್ಷದ ವ್ಯಕ್ತಿ ಅತ್ಯಾಚಾರವೆಗಿರುವ ಘಟನೆ ನಡೆದಿದೆ. ಇದಾದ ಬಳಿಕ ಕೋಮು ಉದ್ವಿಗ್ನತೆ ಭುಗಿಲೆದ್ದಿದ್ದು, ಪ್ರತಿಭಟನೆ ಮತ್ತು ವಿಧ್ವಂಸಕ ಕೃತ್ಯಗಳಿಗೆ ಕಾರಣವಾಯಿತು. ಜತೆಗೆ ಮಸೀದಿ ಮೇಲೆ ಕಲ್ಲು ತೂರಾಟವೂ ನಡೆಯಿತು. ಈ ಘಟನೆ ಏಪ್ರಿಲ್ 12ರಂದು ನಡೆದಿತ್ತು, ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿರುವ ಆರೋಪಿ ಉಸ್ಮಾನ್, ಬಾಲಕಿಯನ್ನು ಆಮಿಷವೊಡ್ಡಿ ತನ್ನ ಕಾರಿನಲ್ಲಿ ಕರೆದುಕೊಂಡು ಹೋಗಿ ಈ ಕೃತ್ಯ ಎಸಗಿದ್ದಾನೆ ಎಂದು ವರದಿಯಾಗಿದೆ.

ನೈನಿತಾಲ್, ಮೇ 02: ಉತ್ತರಾಖಂಡದ ನೈನಿತಾಲ್​ನಲ್ಲಿ 12 ವರ್ಷದ ಬಾಲಕಿ ಮೇಲೆ 60 ವರ್ಷದ ವ್ಯಕ್ತಿ ಅತ್ಯಾಚಾರವೆಗಿರುವ ಘಟನೆ ನಡೆದಿದೆ. ಇದಾದ ಬಳಿಕ ಕೋಮು ಉದ್ವಿಗ್ನತೆ ಭುಗಿಲೆದ್ದಿದ್ದು, ಪ್ರತಿಭಟನೆ ಮತ್ತು ವಿಧ್ವಂಸಕ ಕೃತ್ಯಗಳಿಗೆ ಕಾರಣವಾಯಿತು. ಜತೆಗೆ ಮಸೀದಿ ಮೇಲೆ ಕಲ್ಲು ತೂರಾಟವೂ ನಡೆಯಿತು.
ಈ ಘಟನೆ ಏಪ್ರಿಲ್ 12ರಂದು ನಡೆದಿತ್ತು, ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿರುವ ಆರೋಪಿ ಉಸ್ಮಾನ್, ಬಾಲಕಿಯನ್ನು ಆಮಿಷವೊಡ್ಡಿ ತನ್ನ ಕಾರಿನಲ್ಲಿ ಕರೆದುಕೊಂಡು ಹೋಗಿ ಈ ಕೃತ್ಯ ಎಸಗಿದ್ದಾನೆ ಎಂದು ವರದಿಯಾಗಿದೆ.

ಏಪ್ರಿಲ್ 30 ರಂದು ಆಕೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಉಸ್ಮಾನ್ ನನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಬಂಧಿಸಲಾಗಿದೆ. ಈ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿತ್ತು, ಬಳಿಕ ಜನರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಹಿಂದೂ ಪರ ಸಂಘಟನೆಗಳ ಸದಸ್ಯರು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು.

ಮುಸ್ಲಿಮರು ನಡೆಸುತ್ತಿದ್ದ ಅಂಗಡಿಗಳು ಮತ್ತು ತಿನಿಸುಗಳನ್ನು ಸಹ ಅವರು ಧ್ವಂಸಗೊಳಿಸಿದರು. ಹತ್ತಿರದ ಮಸೀದಿಯ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಗುಂಪು ಪಾಕಿಸ್ತಾನದ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More