Uttarakhand Flood: ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ಕೊಚ್ಚಿ ಹೋದ ಕಾರುಗಳು

Updated on: Jun 29, 2024 | 6:28 PM

ಜೂನ್ 27ರಂದು ಮಾನ್ಸೂನ್ ಉತ್ತರಾಖಂಡವನ್ನು ಪ್ರವೇಶಿಸಿತು. ಭಾರತೀಯ ಹವಾಮಾನ ಇಲಾಖೆ (IMD) ಜುಲೈ 4ರವರೆಗೆ ಉತ್ತರಾಖಂಡ ರಾಜ್ಯದಾದ್ಯಂತ ತೀವ್ರ ಮಳೆಯ ಮುನ್ಸೂಚನೆ ನೀಡಿದೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಇಂದು ಮತ್ತು ನಾಳೆ (ಜೂನ್ 30) ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಇಂದು ವಿಪರೀತ ಮಳೆಯಾಗುವ ನಿರೀಕ್ಷೆಯಿದೆ ಎಂದು ಐಎಂಡಿ ತನ್ನ ಮುನ್ಸೂಚನೆಯಲ್ಲಿ ಹೇಳಿದೆ.

ಉತ್ತರಾಖಂಡ: ಉತ್ತರಾಖಂಡದ ಹರಿದ್ವಾರದಲ್ಲಿ ಉಂಟಾಗಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಗಂಗಾ ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಇದರಿಂದ ಗಂಗಾ ನದಿಯಲ್ಲಿ ಕಾರು, ಬೈಕ್ ಮುಂತಾದ ವಾಹನಗಳು ತೇಲುತ್ತಿರುವುದನ್ನು ಕಾಣಬಹುದು. ಭಾರೀ ಪ್ರವಾಹದಿಂದಾಗಿ ಗಂಗಾ ನದಿಯಲ್ಲಿ ಸ್ನಾನ ಮಾಡದಂತೆ ಜನರಿಗೆ ಸೂಚಿಸಲಾಗಿದೆ. ಉತ್ತರಾಖಂಡದಲ್ಲಿ ಮುಂಗಾರು ಚುರುಕುಗೊಂಡಿದ್ದು, ಹರಿದ್ವಾರದಲ್ಲಿ ಗಂಗಾ ನದಿಯಲ್ಲಿ ಕಾರುಗಳು ತೇಲುತ್ತಿರುವ ವಿಡಿಯೋ ವೈರಲ್ ಆಗಿದೆ.

ಹರಿದ್ವಾರದಲ್ಲಿ ಭಾರೀ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದೆ. ಹರಿದ್ವಾರದಲ್ಲಿ ನಿರಂತರ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿದ್ದು, ವಾಹನಗಳು ಗಂಗಾ ನದಿಯಲ್ಲಿ ತೇಲುತ್ತಿರುವ ದೃಶ್ಯ ಕಂಡು ಬಂದಿದೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಇಂದು ಮತ್ತು ನಾಳೆ (ಜೂನ್ 30) ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಇಂದು ವಿಪರೀತ ಮಳೆಯಾಗುವ ನಿರೀಕ್ಷೆಯಿದೆ ಎಂದು ಐಎಂಡಿ ತನ್ನ ಮುನ್ಸೂಚನೆಯಲ್ಲಿ ಹೇಳಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More