ಉತ್ತರಾಖಂಡ ಹೆಲಿಕಾಪ್ಟರ್ ದುರಂತದಲ್ಲಿ ಕನ್ನಡಿಗರ ಸಾವು; ಬೆಂಗಳೂರಿಗೆ ಆಗಮಿಸಿದ ನಾಲ್ವರ ಮೃತದೇಹ

Updated on: Nov 02, 2026 | 8:03 AM

ಉತ್ತರಾಖಂಡ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಐವರು ಕನ್ನಡಿಗರಲ್ಲಿ ನಾಲ್ವರ ಪಾರ್ಥಿವ ಶರೀರ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿದೆ. ಪ್ರತಾಪ್ ಗೌಡ, ಹೆಚ್.ಎಸ್. ನಟರಾಜ್, ಶಂಕರ್ ಗೌಡ ಮತ್ತು ಕೆ. ಸುಧೀರ್ ಅವರ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಇನ್ನೊಬ್ಬರು ಅರುಣ್ ಸಾಲುಂಕೆ ಅವರ ಮೃತದೇಹ ಬೆಳಗಾವಿಗೆ ರವಾನೆಯಾಗಿದೆ. ಹವಾಮಾನ ವೈಪರೀತ್ಯದಿಂದ ದುರಂತ ಸಂಭವಿಸಿದ್ದು, ನಾಳೆ ಅಂತ್ಯಸಂಸ್ಕಾರ ನಡೆಯಲಿದೆ.

ಬೆಂಗಳೂರು, ನವೆಂಬರ್ 02: ಉತ್ತರಾಖಂಡದಲ್ಲಿ ಸಂಭವಿಸಿದ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಪ್ರಾಣ ಕಳೆದುಕೊಂಡ ಐವರು ಕನ್ನಡಿಗರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗಿದೆ. ಪ್ರತಾಪ್ ಗೌಡ, ಹೆಚ್.ಎಸ್. ನಟರಾಜ್, ಶಂಕರ್ ಗೌಡ ಮತ್ತು ಕೆ. ಸುಧೀರ್ ಅವರ ಮೃತದೇಹಗಳು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿವೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ನಂತರ ಆಂಬುಲೆನ್ಸ್ ಮೂಲಕ ಅವರವರ ಊರುಗಳಿಗೆ ರವಾನಿಸಲಾಯಿತು. ಬೆಳಗಾವಿಯ ಸಿ.ಸಿ.ಬಿ ಇನ್ಸ್‌ಪೆಕ್ಟರ್ ಆಗಿದ್ದ ಅರುಣ್ ಸಾಲುಂಕೆ ಅವರ ಮೃತದೇಹವನ್ನು ನೇರವಾಗಿ ಬೆಳಗಾವಿಗೆ ರವಾನಿಸಲಾಗಿದೆ.

ಈ ಐವರು ಸ್ನೇಹಿತರು ಪ್ರವಾಸಕ್ಕೆ ತೆರಳಿದ್ದಾಗ ಹವಾಮಾನ ವೈಪರೀತ್ಯದಿಂದ ಹೆಲಿಕಾಪ್ಟರ್ ದುರಂತಕ್ಕೆ ಬಲಿಯಾಗಿದ್ದರು. ಅವರ ಮೃತದೇಹಗಳನ್ನು ಗುರುತಿಸುವುದು ದೊಡ್ಡ ಸವಾಲಾಗಿತ್ತು. ನಾಳೆ ವಿವಿಧ ಸ್ಥಳಗಳಲ್ಲಿ ಅವರ ಅಂತ್ಯಕ್ರಿಯೆಗಳು ನೆರವೇರಲಿವೆ. ಹುಲಿಯೂರು ದುರ್ಗದ ಶಂಕರೇಗೌಡ ಅವರ ಅಂತ್ಯಕ್ರಿಯೆ ಹಕ್ಕಿಮರಿಪಾಳ್ಯದಲ್ಲಿ ಬೆಳಗ್ಗೆ 8 ಗಂಟೆಗೆ, ಹಳಿಯೂರಿನಲ್ಲಿ ನಟರಾಜ್ ಅವರ ಅಂತ್ಯಕ್ರಿಯೆ ಬೆಳಗ್ಗೆ 9 ಗಂಟೆಗೆ ನಡೆಯಲಿದೆ. ಹಾಸನದ ಬಾಚಿಹಳ್ಳಿಯಲ್ಲಿ ಸಂಜೆ 4 ಗಂಟೆಗೆ ಪ್ರತಾಪ್ ಗೌಡ ಅವರ ಅಂತ್ಯಸಂಸ್ಕಾರ ನೆರವೇರಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More