ಬರ್ತ್​ಡೇ ದಿನ ತಾಯಿಯನ್ನು ತುಂಬಾನೇ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದ ರವಿಚಂದ್ರನ್

ಬರ್ತ್​ಡೇ ದಿನ ತಾಯಿಯನ್ನು ತುಂಬಾನೇ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದ ರವಿಚಂದ್ರನ್

TV9 Web
| Updated By: ರಾಜೇಶ್ ದುಗ್ಗುಮನೆ

Updated on: May 30, 2022 | 8:14 PM

ತಾಯಿ ಇಲ್ಲದೆ ಅವರು ಮೊದಲ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ವೇಳೆ ರವಿಚಂದ್ರನ್ ತಂದೆ-ತಾಯಿಯನ್ನು ನೆನಪಿಸಿಕೊಂಡಿದ್ದಾರೆ.

ರವಿಚಂದ್ರನ್ ಅವರ (Ravichandran) ತಾಯಿ ಪಟ್ಟಮ್ಮಾಳ್​ ವೀರಸ್ವಾಮಿ ಅವರು (Pattammal Veeraswamy) ಈ ವರ್ಷ ಫೆ.28ರಂದು ನಿಧನರಾದರು. ಅವರಿಗೆ 83 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಪಟ್ಟಮ್ಮಾಳ್​ ವೀರಸ್ವಾಮಿ ಅವರು ಕೊನೆಯುಸಿರು ಎಳೆದರು. ಈ ಕಾರಣಕ್ಕೆ ತಾಯಿ ಇಲ್ಲದೆ ಅವರು ಮೊದಲ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ವೇಳೆ ರವಿಚಂದ್ರನ್ ತಂದೆ-ತಾಯಿಯನ್ನು ನೆನಪಿಸಿಕೊಂಡಿದ್ದಾರೆ. ‘ನಾನು ಈ ಬಾರಿಯ ಬರ್ತ್​​ಡೇ ದಿನ ನನ್ನ ತಂದೆ-ತಾಯಿಯನ್ನು ತುಂಬಾನೇ ಮಿಸ್ ಮಾಡಿಕೊಳ್ಳುತ್ತಿದ್ದೇನೆ’ ಎಂದಿದ್ದಾರೆ ರವಿಚಂದ್ರನ್.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.