ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ರಾಜಕೀಯ ನಿವೃತ್ತಿ ಊಹಾಪೋಹ ವಿಚಾರವಾಗಿ ಗುರುವಾರ ಮೈಸೂರಿನಲ್ಲಿ ಸ್ಪಷ್ಟನೆ ನೀಡಿದ್ದ ಕೇಂದ್ರ ಸಚಿವ ವಿ ಸೋಮಣ್ಣ ಇದೀಗ ನೆಲಮಂಗಲದಲ್ಲಿಯೂ ಆ ಬಗ್ಗೆ ಮಾತನಾಡಿದ್ದಾರೆ. ತುಮಕೂರಿನಿಂದ ಮುಂದಿನ ಬಾರಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೆನೇ ವಿನಹ, ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ವಿಡಿಯೋ ಇಲ್ಲಿದೆ.
ನೆಲಮಂಗಲ, ಸೆಪ್ಟೆಂಬರ್ 5: ರಾಜಕೀಯ ನಿವೃತ್ತಿ ವರದಿಗಳ ಬಗ್ಗೆ ಕೇಂದ್ರ ಸಚಿವ ವಿ ಸೋಮಣ್ಣ ಶುಕ್ರವಾರ ಮತ್ತೆ ಸ್ಪಷ್ಟನೆ ನೀಡಿದ್ದಾರೆ. ನೆಲಮಂಗಲದಲ್ಲಿ ಮಾತನಾಡಿದ ಅವರು, ನಾನು ಅನಿರೀಕ್ಷಿತವಾಗಿ ತುಮಕೂರಿಗೆ ಹೋದವನು. ಕೇಂದ್ರದ ನಾಯಕರ ಸೂಚನೆ ಮೇರೆಗೆ ನಾನು ತುಮಕೂರಿನಿಂದ ಸ್ಪರ್ಧಿಸಿದೆ. ಅಲ್ಲಿ ಆಗಬೇಕಿರುವ ಅಭಿವೃದ್ಧಿ ಕೆಲಸಗಳನ್ನು ಆದಷ್ಟು ಬೇಗನೆ ಮಾಡುತ್ತಿರುವೆ. 50 ವರ್ಷಗಳಲ್ಲಿ ಆಗಬೇಕಾದ ಕೆಲಸವನ್ನು 5 ವರ್ಷಗಳಲ್ಲಿ ಮಾಡುವೆ. ಕಳೆದೊಂದು ವರ್ಷದಿಂದ ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳಾಗಿವೆ. ನಾನು ಹೇಳಿದ್ದು ಇಷ್ಟೇ. ಮುಂದಿನ ಬಾರಿ ತುಮಕೂರಿನಿಂದ ಸ್ಪರ್ಧಿಸುವುದಿಲ್ಲ. ರಾಜಕೀಯ ನಿವೃತ್ತಿ ಬಗ್ಗೆ ಹೇಳಿಲ್ಲ ಎಂದರು.