Karnataka Assembly Polls: ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸಚಿವ ವಿ ಸೋಮಣ್ಣ? ಗುಟ್ಟು ಬಿಟ್ಟುಕೊಡದ ಬಿಎಸ್ ಯಡಿಯೂರಪ್ಪ
ಕೇಂದ್ರದ ನಾಯಕರು ಅಭ್ಯರ್ಥಿಗಳ ಬಗ್ಗೆ ಅಂತಿಮ ನಿರ್ಣಯ ತೆಗೆದುಕೊಳ್ಳುತ್ತಾರೆ, ಪಟ್ಟಿಯನ್ನು ನಾಳೆ ದೆಹಲಿಗೆ ಕಳಿಸಲಾಗುವುದು ಎಂದು ಯಡಿಯೂರಪ್ಪ ಹೇಳಿದರು.
ಬೆಂಗಳೂರು: ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ವಿರುದ್ಧ ಯಾರನ್ನು ಕಣಕ್ಕಿಸುವುದು ಅಂತ ರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರು ತಲೆಕೆಡಿಸಿಕೊಂಡಂತಿದೆ. ಮೊದಲಿಗೆ ಬಿಎಸ್ ಯಡಿಯೂರಪ್ಪರ (BS Yediyurappa) ಮಗ ಬಿವೈ ವಿಜಯೇಂದ್ರ ಸ್ಪರ್ಧಿಸುತ್ತಾರೆ ಅಂತ ವದಂತಿ ಹರಡಿತ್ತು. ಆದರೆ, ಅವರು ಶಿಕಾರಿಪುರದಿಂದ ಸ್ಪರ್ಧಿಸುವುದು ಖಚಿತವಾಗಿದೆ ಮತ್ತು ಕ್ಷೇತ್ರದಲ್ಲಿ ಪ್ರಚಾರವನ್ನೂ ಆರಂಭಿಸಿದ್ದಾರೆ. ತಾಜಾ ಮಾಹಿತಿಯೊಂದರ ಪ್ರಕಾರ ಸಚಿವ ವಿ ಸೋಮಣ್ಣ (V Somanna) ವರುಣಾದಲ್ಲಿ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ. ಅದರ ದೃಡೀಕರಣಕ್ಕಾಗಿ ಮಾಧ್ಯಮ ಪ್ರತಿನಿಧಿಗಳು ಯಡಿಯೂರಪ್ಪರನ್ನು ಪ್ರಶ್ನಿಸಿದಾಗ ಅವರಿಂದ ಸ್ಪಷ್ಟ ಉತ್ತರ ಸಿಗಲಿಲ್ಲ. ಕೇಂದ್ರದ ನಾಯಕರು ಅಂತಿಮ ನಿರ್ಣಯ ತೆಗೆದುಕೊಳ್ಳುತ್ತಾರೆ, ಅಭ್ಯರ್ಥಿಗಳ ಪಟ್ಟಿ ನಾಳೆ ದೆಹಲಿಗೆ ಕಳಿಸಲಾಗುವುದು ಎಂದು ಯಡಿಯೂರಪ್ಪ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ