ಯಾವ ಖಾತೆ ನೀಡಿದ್ರೂ ಸಮರ್ಥವಾಗಿ ನಿಭಾಯಿಸುವೆ- ವಿ ಸೋಮಣ್ಣ
ಯಾವ ಖಾತೆ ನೀಡಿದ್ರೂ ಸಮರ್ಥವಾಗಿ ನಿಭಾಯಿಸುವೆ ಎಂದು ತುಮಕೂರು ನೂತನ ಸಂಸದ ವಿ. ಸೋಮಣ್ಣ(V Somanna) ಹೇಳಿದರು. ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ‘ ಜವಾಬ್ದಾರಿ ಹಾಗೂ ಕರ್ತವ್ಯ ನಿರ್ವಹಿಸುವಂತೆ ಸೂಚನೆ ನೀಡಿದ್ದಾರೆ. ಎಲ್ಲರೂ ಹೇಗೆ ನಡೆದುಕೊಳ್ಳಬೇಕು ಎಂದು ಮೋದಿ ಅವರು ಹೇಳಿದ್ದಾರೆ ಎಂದರು.
ನವದೆಹಲಿ, ಜೂ.09: ವಿ. ಸೋಮಣ್ಣಗೆ ಮಂತ್ರಿ ಸ್ಥಾನ ಫಿಕ್ಸ್ ಆಗಿದೆ. ಈ ಕುರಿತು ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ತುಮಕೂರು ಸಂಸದ ವಿ. ಸೋಮಣ್ಣ(V Somanna), ‘ ನನಗೆ ಯಾವ ಖಾತೆ ನೀಡಿದ್ರೂ ಸಮರ್ಥವಾಗಿ ನಿಭಾಯಿಸುವೆ ಎಂದು ಹೇಳಿದರು. ಈಗಾಗಲೇ ಜವಾಬ್ದಾರಿ ಹಾಗೂ ಕರ್ತವ್ಯ ನಿರ್ವಹಿಸುವಂತೆ ಸೂಚನೆ ನೀಡಿದ್ದಾರೆ. ಎಲ್ಲರೂ ಹೇಗೆ ನಡೆದುಕೊಳ್ಳಬೇಕು ಎಂದು ಮೋದಿ ಅವರು ಹೇಳಿದ್ದಾರೆ. ಎಲ್ಲಕ್ಕಿಂತ ದೇಶ ದೊಡ್ಡದು, ಚೆನ್ನಾಗಿ ನಡೆದುಕೊಳ್ಳಲು ತಿಳಿಸಿದ್ದಾರೆ. ಪಕ್ಷ ಅವಕಾಶ ನೀಡಿದೆ, ಪಕ್ಷ ಹೇಳಿದಂತೆ ನಡೆದುಕೊಂಡಿದ್ದೇನೆ. ಪಕ್ಷದ ನಾಯಕರಿಗೆ ನಾನು ಆಭಾರಿಯಾಗಿದ್ದೇನೆ ಎಂದರು.
ಇನ್ನು ರಾಮನಗರ ಜಿಲ್ಲೆಯ ದೊಡ್ಡಮರಳವಾಡಿಯಲ್ಲಿ ವೀರಣ್ಣ ಮತ್ತು ಕೆಂಪಮ್ಮ ದಂಪತಿಗಳಿಗೆ 20 ಜುಲೈ 1951 ರಂದು ಸೋಮಣ್ಣ ಜನಿಸಿದರು. ಶೈಲಜಾ ಎಂಬಾಕೆಯನ್ನು ಮದುವೆಯಾಗಿ ಮೂರು ಮಕ್ಕಳಿದ್ದಾರೆ. ಸೋಮಣ್ಣ 4 ಆಗಸ್ಟ್ 2021 ರಿಂದ 13 ಮೇ 2023 ರವರೆಗೆ ಕರ್ನಾಟಕದ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಸಚಿವರಾಗಿದ್ದರು. ಮೇ 2018 ರಿಂದ 13 ಮೇ 2023 ರವರೆಗೆ ಗೋವಿಂದರಾಜ್ ನಗರ ಕ್ಷೇತ್ರದಿಂದ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿದ್ದರು. 10 ಜೂನ್ 2016 ರಂದು ಅವರು ಕರ್ನಾಟಕ ವಿಧಾನ ಪರಿಷತ್ತಿ ಸದಸ್ಯರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಇದೀಗ 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ತುಮಕೂರು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಸಂಸದರಾಗಿ ಆಯ್ಕೆಯಾಗಿದ್ದಾರೆ.
ರಾಜ್ಯದ ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ