ಸಿದ್ದರಾಮಯ್ಯ ವಿರುದ್ದ ಸೋಮಣ್ಣ 25 ಸಾವಿರ ಮತಗಳಿಂದ ಗೆಲ್ಲುತ್ತಾರೆ: ಕೋಟ್ಯಾಂತರ ರೂ. ಬೆಲೆ ಬಾಳುವ ನಿವೇಶನ ಅಗ್ರಿಮೆಂಟ್, ವಿಡಿಯೋ ವೈರಲ್

Updated on: May 12, 2023 | 3:15 PM

ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ದ ಸೋಮಣ್ಣ 25 ಸಾವಿರ ಮತಗಳಿಂದ ಗೆಲುವು ಸಾಧಿಸುತ್ತಾರೆ. 3,300 ಚದರಡಿ ನಿವೇಶನ ಅಗ್ರಿಮೆಂಟ್ ಮಾಡಿಕೊಡುತ್ತೇನೆ ಎಂದು ಬಹಿರಂಗ ಸವಾಲು ಹಾಕಿರುವ ವಿಡಿಯೋ ವೈರಲ್ ಆಗಿದೆ.

ಮೈಸೂರು: ರಾಜ್ಯದ ಮತದಾರರು ರಾಜಕೀಯ ಪಕ್ಷಗಳ ಭವಿಷ್ಯ ಬರೆದಾಗಿದೆ. ಕದನ ಕಲಿಗಳ ಹಣೆ ಬರಹ ಮತಯಂತ್ರದಲ್ಲಿ ಸುಭದ್ರವಾಗಿದೆ. ಈ ನಡುವೆ ಚುನಾವಣೋತ್ತರ ಸಮೀಕ್ಷೆಗಳು ತೀವ್ರ ಕುತೂಹಲ ಕೆರಳಿಸಿವೆ. ಮತದಾನ ಮುಗೀತಿದ್ದಂತೆ ರಾಜ್ಯದಲ್ಲಿ ಬೆಟ್ಟಿಂಗ್ ಭರಾಟೆ ಜೋರಾಗಿದೆ. ಬೆಟ್ಟಿಂಗ್ ಬಜಾರ್​ನಲ್ಲಿ ಬಾಜಿ ಆಟ ಜೋರಾಗೇ ನಡೆಯುತ್ತಿದ್ದು, ಕಾರ್ಯಕರ್ತರು ಕೈಯಲ್ಲಿ ಕಂತೆ ಕಂತೆ ಹಣ ಹಿಡಿದು ಎದುರಾಳಿಗಳಿಗೆ ಸವಾಲು ಹಾಕುತ್ತಿದ್ದಾರೆ.

ಅದರಲ್ಲೂ ಮುಖ್ಯವಾಗಿ ಈ ಬಾರಿ ಸದ್ದು ಮಾಡಿರುವ ವರುಣಾ ಕ್ಷೇತ್ರದ ಫಲಿತಾಂಶ ಕುತೂಹಲ ಮೂಡಿಸಿದೆ. ಸಿದ್ದರಾಮಯ್ಯ ಅವರು ಗೆದ್ದೇ ಗೆಲ್ಲುತ್ತಾರೆ ಎನ್ನುವ ವಿಶ್ವಾಸದಲ್ಲಿದ್ದರೆ, ಇತ್ತ ಸೋಮಣ್ಣ ಗೆಲ್ಲಲಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಹೇಳುತ್ತಿದ್ದಾರೆ. ಅಲ್ಲದೇ ಸೋಮಣ್ಣ ಪರ ಬೆಟ್ಟಿಂಗ್​ ಸಹ ಜೋರಾಗಿದೆ. ಸಿದ್ದರಾಮಯ್ಯ ವಿರುದ್ದ ಸೋಮಣ್ಣ 25 ಸಾವಿರ ಮತಗಳಿಂದ ಗೆಲುವು ಸಾಧಿಸುತ್ತಾರೆ ಎಂದು ಬೆಟ್ಟಿಂಗ್ ಆಹ್ವಾನ ನೀಡಿದ್ದಾರೆ. 3,300 ಚದರಡಿ ನಿವೇಶನ ಅಗ್ರಿಮೆಂಟ್ ಮಾಡಿಕೊಡುತ್ತೇನೆ ಎಂದು ಬಹಿರಂಗ ಸವಾಲು ಹಾಕಿರುವ ವಿಡಿಯೋ ವೈರಲ್ ಆಗಿದೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More