ಸೋಮಣ್ಣ ಎಲ್ಲೂ ಹೋಗಲ್ಲ, ನಮ್ಮೊಂದಿಗಿರುತ್ತಾರೆ; ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ಬರ ಪರಿಹಾರ ನಿಧಿಗೆ ಸಂಬಂಧಿಸಿದಂತೆ, ಬಿಜೆಪಿ ಸಂಸದರು ಕೇಂದ್ರದ ನಾಯಕರನ್ನು ಭೇಟಿಯಾಗಿದ್ದಾರೆ, ವಿಜಯಯೇಂದ್ರ ಸಹ ಅವರೊಂದಿಗೆ ಮಾತಾಡಿದ್ದಾರೆ, ಆದಷ್ಟು ಬೇಗ ಬಿಡುಗಡೆ ಮಾಡಿಸುವ ಪ್ರಯತ್ನ ಮಾಡುತ್ತೇವೆ ಅಂತ ಹೇಳಿದ ಯಡಿಯೂರಪ್ಪ, ಹಾಗಂತ ರಾಜ್ಯ ಸರ್ಕಾರ ಪರಿಹಾರ ನಿಧಿ ನಿರೀಕ್ಷೆಯಲ್ಲಿ ಕೈಕಟ್ಟಿ ಕುಳಿತಿಕೊಳ್ಳಬಾರದು, ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕು ಎಂದರು.
ಶಿವಮೊಗ್ಗ: ವಿಧಾನಸಭಾ ಚುನಾವಣೆಗೆ (Assembly Polls) ಮೊದಲು ಮತ್ತು ನಂತರ ಬಿಜೆಪಿ ನಾಯಕ ವಿ ಸೋಮಣ್ಣ (V Somanna) ಅವರು ಬಿಎಸ್ ಯಡಿಯೂರಪ್ಪ (BS Yediyurappa) ಮತ್ತು ಬಿವೈ ವಿಜಯೇಂದ್ರ (BY Vijayendra) ವಿರುದ್ಧ ಬಹಿರಂಗವಾಗೇ ಅಸಮಾಧಾನ ವ್ಯಕ್ತಪಡಿಸಿದ್ದರು ಮತ್ತು ಅವರಿಂದಾಗಿಯೇ ಚುನಾವಣೆಗೆ ಮೊದಲು ಅವರು ಕಾಂಗ್ರೆಸ್ ಸೇರಲಿರುವ ವದಂತಿ ಹರಡಿತ್ತು. ಅಮೇಲೆ ನಡೆದಿದ್ದೆಲ್ಲ ಕನ್ನಡಿಗರಿಗೆ ಗೊತ್ತಿದೆ. ಈಗ ಸೋಮಣ್ಣ ಕಾಂಗ್ರೆಸ್ ಸೇರುವ ಬಗ್ಗೆ ಮತ್ತೊಮ್ಮೆ ವದಂತಿ ಹರಡುತ್ತಿದೆ. ವಿಷಯಕ್ಕೆ ಸಂಬಂಧಿಸಿದಂತೆ ನಗರದಲ್ಲಿಂದು ಯಡಿಯೂರಪ್ಪನ್ನು ಕೇಳಿದಾಗ, ಸೋಮಣ್ಣ ಎಲ್ಲೂ ಹೋಗಲ್ಲ, ತಮ್ಮ ಪಕ್ಷದಲ್ಲೇ ಇರುತ್ತಾರೆ, ತಾನು ಅವರೊಂದಿಗೆ ಮಾತಾಡುವುದಾಗಿ ಹೇಳಿದರು. ಬರ ಪರಿಹಾರ ನಿಧಿ ಇನ್ನೂ ಕೇಂದ್ರದಿಂದ ಬಿಡುಗಡೆಯಾಗಿಲ್ಲ ಅಂತ ಅವರಿಗೆ ಹೇಳಿದಾಗ, ಬಿಜೆಪಿ ಸಂಸದರು ಕೇಂದ್ರದ ನಾಯಕರನ್ನು ಭೇಟಿಯಾಗಿದ್ದಾರೆ, ವಿಜಯಯೇಂದ್ರ ಅಹ ಅವರೊಂದಿಗೆ ಮಾತಾಡಿದ್ದಾರೆ, ಆದಷ್ಟು ಬೇಗ ಬಿಡುಗಡೆ ಮಾಡಿಸುವ ಪ್ರಯತ್ನ ಮಾಡುತ್ತೇವೆ ಅಂತ ಹೇಳಿದ ಯಡಿಯೂರಪ್ಪ, ಹಾಗಂತ ರಾಜ್ಯ ಸರ್ಕಾರ ಪರಿಹಾರ ನಿಧಿ ನಿರೀಕ್ಷೆಯಲ್ಲಿ ಕೈಕಟ್ಟಿ ಕುಳಿತಿಕೊಳ್ಳಬಾರದು, ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕು ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ