ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​: ಸ್ವಾಮೀಜಿ ಹೇಳಿದ್ದಿಷ್ಟು

Edited By:

Updated on: May 14, 2026 | 4:15 PM

ಪೋಕ್ಸೋ ಕೇಸ್ ಸಂಬಂಧ ವಚನಾನಂದ ಸ್ವಾಮೀಜಿಯನ್ನು ಹರಿಹರ ಗ್ರಾಮಾಂತರ ಪೊಲೀಸರು 5 ಗಂಟೆಗಳಿಗೂ ಹೆಚ್ಚು ವಿಚಾರಣೆ ನಡೆಸಿದ್ದಾರೆ. ಪೊಲೀಸ್​​ ಠಾಣೆಯಿಂದ ಹೊರಬಂದ ಸ್ವಾಮೀಜಿ ಕಾನೂನನ್ನು ಗೌರವಿಸುತ್ತೇವೆ ಮತ್ತು ಪಾಲಿಸುತ್ತೇವೆ ಎಂದು ಮೊದಲ ಪ್ರತಿಕ್ರಿಯೆ ನೀಡಿದ್ದು, ಈ ವೇಳೆ ಭಕ್ತರು ಶ್ರೀಗಳ ಪರ ಜಯಘೋಷ ಕೂಗಿದ ಪ್ರಸಂಗವೂ ನಡೆದಿದೆ.

ದಾವಣಗೆರೆ, ಮೇ 14: ಪೋಕ್ಸೋ ಕೇಸ್ ವಿಚಾರವಾಗಿ ವಚನಾನಂದ ಸ್ವಾಮೀಜಿಯನ್ನು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. 5 ಗಂಟೆಗಳಿಗೂ ಹೆಚ್ಚು ಸಮಯ ಶ್ರೀಗಳಿಂದ ಮಾಹಿತಿ ಪಡೆದಿರುವ ಪೊಲೀಸರು, ಮತ್ತೆ ವಿಚಾರಣೆಗೆ ಕರೆದಾಗ ಸಹಕರಿಸುವಂತೆ ಸೂಚಿಸಿದ್ದಾರೆ. ಪೊಲೀಸರ ವಿಚಾರಣೆ ಮುಗಿಸಿ ಹೊರಬಂದ ಸ್ವಾಮೀಜಿ ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದು, ಕಾನೂನನ್ನು ಗೌರವಿಸುತ್ತೇವೆ, ಪಾಲಿಸುತ್ತೇವೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More