IND vs ZIM: ವೈಭವ್ ತೋಳ್ಬಲಕ್ಕೆ 102 ಮೀ. ದೂರ ಹೋಗಿ ಬಿದ್ದ ಚೆಂಡು; ವಿಡಿಯೋ
Vaibhav Sooryavanshi: ಹರಾರೆಯಲ್ಲಿ ಜಿಂಬಾಬ್ವೆ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ವೈಭವ್ ಸೂರ್ಯವಂಶಿ 81 ರನ್‌ಗಳ ಸ್ಪೋಟಕ ಇನ್ನಿಂಗ್ಸ್ ಆಡಿದರು. 49 ಎಸೆತಗಳಲ್ಲಿ 9 ಬೌಂಡರಿ, 4 ಸಿಕ್ಸರ್ ಸಹಿತ ಮಿಂಚಿದರು. 102 ಮೀಟರ್ ಸಿಕ್ಸರ್ ಪ್ರಮುಖ ಆಕರ್ಷಣೆಯಾಗಿತ್ತು. ಶತಕ ವಂಚಿತರಾದರೂ, ವೈಭವ್ ಭಾರತಕ್ಕೆ ದೊಡ್ಡ ಮೊತ್ತ ಗಳಿಸಲು ನೆರವಾದರು, ಅವರ ಭರ್ಜರಿ ಪ್ರದರ್ಶನ ಗಮನ ಸೆಳೆಯಿತು.
ಹರಾರೆಯಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ 81 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ತಮ್ಮ ಇನ್ನಿಂಗ್ಸ್ನಲ್ಲಿ 49 ಎಸೆತಗಳನ್ನು ಎದುರಿಸಿದ ವೈಭವ್ 9 ಬೌಂಡರಿ ಹಾಗೂ 4 ಸಿಕ್ಸರ್ ಕೂಡ ಬಾರಿಸಿದರು. ಈ 4 ಸಿಕ್ಸರ್ನಲ್ಲಿ ಒಂದು ಸಿಕ್ಸರ್ ಬರೋಬ್ಬರಿ 102 ಮೀಟರ್ ದೂರ ಹೋಗಿ ಬಿದ್ದಿತು. ಜಿಂಬಾಬ್ವೆ ತಂಡದ ನಾಯಕ ಸಿಕಂದರ್ ರಝಾ ಓವರ್ನಲ್ಲಿ ವೈಭವ್ ಈ ಬೃಹತ್ ಸಿಕ್ಸರ್ ಬಾರಿಸಿದರು. ಮೊದಲ ಪಂದ್ಯದಲ್ಲೂ ವೈಭವ್ 99 ಮೀಟರ್ ಉದ್ದದ ಸಿಕ್ಸರ್ ಬಾರಿಸಿದ್ದರು. ಇನ್ನು ಈ ಪಂದ್ಯದಲ್ಲಿ ವೈಭವ್ ಶತಕ ವಂಚಿತರಾದರೂ ತಂಡವನ್ನು ಬೃಹತ್ ಮೊತ್ತದತ್ತ ಕೊಂಡೊಯ್ದರು.
Follow Us
Latest Videos
ಕಣ್ಣೀರಿಡುತ್ತಾ ಕೆಎಸ್ಆರ್ಟಿಸಿ ಬಸ್ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ

