IND vs ZIM: ವೈಭವ್ ತೋಳ್ಬಲಕ್ಕೆ 102 ಮೀ. ದೂರ ಹೋಗಿ ಬಿದ್ದ ಚೆಂಡು; ವಿಡಿಯೋ

Updated on: Jul 26, 2026 | 6:04 PM

Vaibhav Sooryavanshi: ಹರಾರೆಯಲ್ಲಿ ಜಿಂಬಾಬ್ವೆ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ವೈಭವ್ ಸೂರ್ಯವಂಶಿ 81 ರನ್‌ಗಳ ಸ್ಪೋಟಕ ಇನ್ನಿಂಗ್ಸ್ ಆಡಿದರು. 49 ಎಸೆತಗಳಲ್ಲಿ 9 ಬೌಂಡರಿ, 4 ಸಿಕ್ಸರ್‌ ಸಹಿತ ಮಿಂಚಿದರು. 102 ಮೀಟರ್ ಸಿಕ್ಸರ್ ಪ್ರಮುಖ ಆಕರ್ಷಣೆಯಾಗಿತ್ತು. ಶತಕ ವಂಚಿತರಾದರೂ, ವೈಭವ್ ಭಾರತಕ್ಕೆ ದೊಡ್ಡ ಮೊತ್ತ ಗಳಿಸಲು ನೆರವಾದರು, ಅವರ ಭರ್ಜರಿ ಪ್ರದರ್ಶನ ಗಮನ ಸೆಳೆಯಿತು.

ಹರಾರೆಯಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ 81 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ತಮ್ಮ ಇನ್ನಿಂಗ್ಸ್​ನಲ್ಲಿ 49 ಎಸೆತಗಳನ್ನು ಎದುರಿಸಿದ ವೈಭವ್ 9 ಬೌಂಡರಿ ಹಾಗೂ 4 ಸಿಕ್ಸರ್ ಕೂಡ ಬಾರಿಸಿದರು. ಈ 4 ಸಿಕ್ಸರ್​ನಲ್ಲಿ ಒಂದು ಸಿಕ್ಸರ್ ಬರೋಬ್ಬರಿ 102 ಮೀಟರ್ ದೂರ ಹೋಗಿ ಬಿದ್ದಿತು. ಜಿಂಬಾಬ್ವೆ ತಂಡದ ನಾಯಕ ಸಿಕಂದರ್ ರಝಾ ಓವರ್​ನಲ್ಲಿ ವೈಭವ್ ಈ ಬೃಹತ್ ಸಿಕ್ಸರ್ ಬಾರಿಸಿದರು. ಮೊದಲ ಪಂದ್ಯದಲ್ಲೂ ವೈಭವ್ 99 ಮೀಟರ್ ಉದ್ದದ ಸಿಕ್ಸರ್ ಬಾರಿಸಿದ್ದರು. ಇನ್ನು ಈ ಪಂದ್ಯದಲ್ಲಿ ವೈಭವ್ ಶತಕ ವಂಚಿತರಾದರೂ ತಂಡವನ್ನು ಬೃಹತ್ ಮೊತ್ತದತ್ತ ಕೊಂಡೊಯ್ದರು.

Follow Us