IND vs ENG: ಏಕಾಂಗಿಯಾದ ವೈಭವ್ ಸೂರ್ಯವಂಶಿ ವಿಡಿಯೋ ವೈರಲ್
Vaibhav Sooryavanshi Dropped: ಇಂಗ್ಲೆಂಡ್ ವಿರುದ್ಧದ ಐದನೇ T20 ಪಂದ್ಯದಿಂದ ವೈಭವ್ ಸೂರ್ಯವಂಶಿಯನ್ನು ಕೈಬಿಡಲಾಗಿದೆ. ಹಿಂದಿನ ಮೂರು ಪಂದ್ಯಗಳಲ್ಲಿ ಕೇವಲ 14, 13, 15 ರನ್ ಗಳಿಸಿ ಕಳಪೆ ಪ್ರದರ್ಶನ ನೀಡಿದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ. ತಂಡದಿಂದ ಹೊರಬಿದ್ದು ಬೌಂಡರಿ ಬಳಿ ವೈಭವ್ ಏಕಾಂಗಿಯಾಗಿ ಕುಳಿತಿದ್ದ ವಿಡಿಯೋ ವೈರಲ್ ಆಗಿದ್ದು, ಅವರ ಮುಖದಲ್ಲಿನ ನಿರಾಶೆ ಸ್ಪಷ್ಟವಾಗಿ ಗೋಚರಿಸುತ್ತಿದೆ.
ಸೌತಾಂಪ್ಟನ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಐದನೇ ಟಿ20 ಪಂದ್ಯದಿಂದ ವೈಭವ್ ಸೂರ್ಯವಂಶಿಯನ್ನು ಹೊರಗಿಡಲಾಗಿದೆ. ಈ ಸರಣಿಯ ಮೂರು ಪಂದ್ಯಗಳಲ್ಲಿ ಆಡುವ ಅವಕಾಶ ಪಡೆದಿದ್ದ ವೈಭವ್ಗೆ ಗಮನಾರ್ಹ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಆಡಿದ ಮೂರು ಪಂದ್ಯಗಳಲ್ಲಿ ಕ್ರಮವಾಗಿ 14, 13 ಮತ್ತು 15 ರನ್ ಕಲೆಹಾಕಲಷ್ಟೇ ಶಕ್ತರಾಗಿದ್ದರು. ಹೀಗಾಗಿ ಅವರನ್ನು ಕೊನೆಯ ಟಿ20 ಪಂದ್ಯದಿಂದ ಕೈಬಿಡಲಾಗಿದೆ. ಹೀಗೆ ತಂಡದಿಂದ ಹೊರಬಿದ್ದು, ಬೌಂಡರಿ ಗೆರೆ ಬಳಿ ವೈಭವ್ ಏಕಾಂಗಿಯಾಗಿ ಕುಳಿತಿದ್ದ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವೈಭವ್ ಅವರ ಮುಖದಲ್ಲಿ ಬೇಸರ ಹಾಗೂ ಹತಾಶೆ ಸ್ಪಷ್ಟವಾಗಿ ಗೋಚರಿಸುತ್ತಿದೆ. ಸ್ವಲ್ಪ ಹೊತ್ತು ಬೇಸರದಿಂದ ಕುಳಿತಿದ್ದ ವೈಭವ್ ಅದಾದ ಬಳಿಕ ಸಪ್ಪೆ ಮೊರೆ ಹಾಕಿಕೊಂಡು ಮೈದಾನದಿಂದ ಹೊರನಡೆದಿದ್ದಾರೆ.
Follow Us
Latest Videos
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ

