AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದೆಂತಹ ನೋವು... ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ!

ಅದೆಂತಹ ನೋವು… ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ!

ಝಾಹಿರ್ ಯೂಸುಫ್
|

Updated on: May 30, 2026 | 8:43 AM

Share

IPL 2026 GT vs RR: ಐಪಿಎಲ್​ನ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್​ಗಳಲ್ಲಿ 214 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಗುಜರಾತ್ ಟೈಟಾನ್ಸ್ ತಂಡವು 18.4 ಓವರ್​ಗಳಲ್ಲಿ ಚೇಸ್ ಮಾಡಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಗುಜರಾತ್ ಟೈಟಾನ್ಸ್ ತಂಡವು ಫೈನಲ್​ಗೆ ಲಗ್ಗೆಯಿಟ್ಟಿದೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಕ್ವಾಲಿಫೈಯರ್-2 ಪಂದ್ಯವು ಭಾವುಕ ಕ್ಷಣಗಳಿಗೆ ಸಾಕ್ಷಿಯಾಯಿತು. ಮುಲ್ಲನ್​ಪುರ್​ನಲ್ಲಿ ನಡೆದ  ರಾಜಸ್ಥಾನ್ ರಾಯಲ್ಸ್ (RR) ಹಾಗೂ ಗುಜರಾತ್ ಟೈಟನ್ಸ್ (GT) ನಡುವಿನ ಈ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ, 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಏಕಾಂಗಿಯಾಗಿ ಹೋರಾಟ ನಡೆಸಿದರೂ ತಂಡವನ್ನು ಫೈನಲ್‌ಗೆ ಕೊಂಡೊಯ್ಯಲು ಸಾಧ್ಯವಾಗಲಿಲ್ಲ.

ಈ ನೋವಿನೊಂದಿಗೆ ಮೈದಾನ ತೊರೆದ ವೈಭವ್ ಸೂರ್ಯವಂಶಿ ನೇರವಾಗಿ ತೆರಳಿದ್ದು ಡಗೌಟ್​ಗೆ. ಇತ್ತ ಪ್ರಶಸ್ತಿ ಸಮಾರೋಪ ನಡೆಯುತ್ತಿದ್ದರೆ ಅತ್ತ ವೈಭವ್ ಏಕಾಂಗಿಯಾಗಿ ಕೂತು ತಮ್ಮ ನೋವನ್ನು ಅದುಮಿಟ್ಟುಕೊಳ್ಳುತ್ತಿದ್ದರು. ಈ ವೇಳೆ ಅವರ ಕಣ್ಣಾಲಿಗಳು ಒದ್ದೆಯಾಗಿತ್ತು.

ಇನ್ನು ಈ ಬಾರಿಯ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಪ್ಲೇಆಫ್ ಹಂತಕ್ಕೇರಲು ಮುಖ್ಯ ಕಾರಣ ವೈಭವ್ ಸೂರ್ಯವಂಶಿ. 16 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದ ವೈಭವ್ ಬರೋಬ್ಬರಿ 776 ರನ್​ ಕಲೆಹಾಕಿದ್ದರು. ಈ ಮೂಲಕ ಆರ್​ಆರ್ ಪಡೆಯನ್ನು ದ್ವಿತೀಯ ಕ್ವಾಲಿಫೈಯರ್​ಗೆ ತಲುಪಿಸಿದ್ದರು.

ಅಷ್ಟೇ ಅಲ್ಲದೆ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಜವಾಬ್ದಾರಿಯುತ 96 ರನ್​ಗಳನ್ನು ಬಾರಿಸಿದರು. ಇದಾಗ್ಯೂ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಗೆಲುವು ದಕ್ಕಿರಲಿಲ್ಲ. ಈ ನೋವಿನೊಂದಿಗೆ ಕೂತಿರುವ ವೈಭವ್ ಸೂರ್ಯವಂಶಿಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್​ಗಳಲ್ಲಿ 214 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಗುಜರಾತ್ ಟೈಟಾನ್ಸ್ ತಂಡವು 18.4 ಓವರ್​ಗಳಲ್ಲಿ ಚೇಸ್ ಮಾಡಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಗುಜರಾತ್ ಟೈಟಾನ್ಸ್ ತಂಡವು ಫೈನಲ್​ಗೆ ಲಗ್ಗೆಯಿಟ್ಟಿದೆ.

 

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More