ಅದೆಂತಹ ನೋವು… ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ!
IPL 2026 GT vs RR: ಐಪಿಎಲ್ನ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್ಗಳಲ್ಲಿ 214 ರನ್ ಕಲೆಹಾಕಿದ್ದರು. ಈ ಗುರಿಯನ್ನು ಗುಜರಾತ್ ಟೈಟಾನ್ಸ್ ತಂಡವು 18.4 ಓವರ್ಗಳಲ್ಲಿ ಚೇಸ್ ಮಾಡಿ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಗುಜರಾತ್ ಟೈಟಾನ್ಸ್ ತಂಡವು ಫೈನಲ್‌ಗೆ ಲಗ್ಗೆಯಿಟ್ಟಿದೆ.
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ ಕ್ವಾಲಿಫೈಯರ್-2 ಪಂದ್ಯವು ಭಾವುಕ ಕ್ಷಣಗಳಿಗೆ ಸಾಕ್ಷಿಯಾಯಿತು. ಮುಲ್ಲನ್ಪುರ್ನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ (RR) ಹಾಗೂ ಗುಜರಾತ್ ಟೈಟನ್ಸ್ (GT) ನಡುವಿನ ಈ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ, 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಏಕಾಂಗಿಯಾಗಿ ಹೋರಾಟ ನಡೆಸಿದರೂ ತಂಡವನ್ನು ಫೈನಲ್‌ಗೆ ಕೊಂಡೊಯ್ಯಲು ಸಾಧ್ಯವಾಗಲಿಲ್ಲ.
ಈ ನೋವಿನೊಂದಿಗೆ ಮೈದಾನ ತೊರೆದ ವೈಭವ್ ಸೂರ್ಯವಂಶಿ ನೇರವಾಗಿ ತೆರಳಿದ್ದು ಡಗೌಟ್ಗೆ. ಇತ್ತ ಪ್ರಶಸ್ತಿ ಸಮಾರೋಪ ನಡೆಯುತ್ತಿದ್ದರೆ ಅತ್ತ ವೈಭವ್ ಏಕಾಂಗಿಯಾಗಿ ಕೂತು ತಮ್ಮ ನೋವನ್ನು ಅದುಮಿಟ್ಟುಕೊಳ್ಳುತ್ತಿದ್ದರು. ಈ ವೇಳೆ ಅವರ ಕಣ್ಣಾಲಿಗಳು ಒದ್ದೆಯಾಗಿತ್ತು.
ಇನ್ನು ಈ ಬಾರಿಯ ಐಪಿಎಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಪ್ಲೇಆಫ್ ಹಂತಕ್ಕೇರಲು ಮುಖ್ಯ ಕಾರಣ ವೈಭವ್ ಸೂರ್ಯವಂಶಿ. 16 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿದ್ದ ವೈಭವ್ ಬರೋಬ್ಬರಿ 776 ರನ್ ಕಲೆಹಾಕಿದ್ದರು. ಈ ಮೂಲಕ ಆರ್ಆರ್ ಪಡೆಯನ್ನು ದ್ವಿತೀಯ ಕ್ವಾಲಿಫೈಯರ್ಗೆ ತಲುಪಿಸಿದ್ದರು.
ಅಷ್ಟೇ ಅಲ್ಲದೆ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಜವಾಬ್ದಾರಿಯುತ 96 ರನ್ಗಳನ್ನು ಬಾರಿಸಿದರು. ಇದಾಗ್ಯೂ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಗೆಲುವು ದಕ್ಕಿರಲಿಲ್ಲ. ಈ ನೋವಿನೊಂದಿಗೆ ಕೂತಿರುವ ವೈಭವ್ ಸೂರ್ಯವಂಶಿಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್ಗಳಲ್ಲಿ 214 ರನ್ ಕಲೆಹಾಕಿದ್ದರು. ಈ ಗುರಿಯನ್ನು ಗುಜರಾತ್ ಟೈಟಾನ್ಸ್ ತಂಡವು 18.4 ಓವರ್ಗಳಲ್ಲಿ ಚೇಸ್ ಮಾಡಿ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಗುಜರಾತ್ ಟೈಟಾನ್ಸ್ ತಂಡವು ಫೈನಲ್‌ಗೆ ಲಗ್ಗೆಯಿಟ್ಟಿದೆ.