SRH vs RR: ಅತಿ ಹೆಚ್ಚು ಸಿಕ್ಸರ್; ಕ್ರಿಸ್ ಗೇಲ್ ದಾಖಲೆ ಮುರಿದ ವೈಭವ್ ಸೂರ್ಯವಂಶಿ
Vaibhav Sooryavanshi: ಐಪಿಎಲ್ ಇತಿಹಾಸದಲ್ಲಿ ಒಂದು ಸೀಸನ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳ ದಾಖಲೆಯನ್ನು ಕ್ರಿಸ್ ಗೇಲ್ (59 ಸಿಕ್ಸರ್‌ಗಳು, 2012) ಹೊಂದಿದ್ದರು. ಆದರೆ, 2026ರ ಐಪಿಎಲ್ ಆವೃತ್ತಿಯಲ್ಲಿ ವೈಭವ್ 60ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಸಿಡಿಸುವ ಮೂಲಕ ಗೇಲ್ ಅವರ 14 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ. ಈ ಮೂಲಕ ವೈಭವ್ ಐಪಿಎಲ್‌ನ ಹೊಸ ಸಿಕ್ಸರ್ ಕಿಂಗ್ ಆಗಿ ಹೊರಹೊಮ್ಮಿದ್ದು, ಕ್ರಿಕೆಟ್ ಜಗತ್ತಿನಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ.
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಸಿಕ್ಸರ್ ಮತ್ತು ಬೌಂಡರಿಗಳ ಮಳೆ ಸುರಿಸಿ ಕೇವಲ 29 ಎಸೆತಗಳಲ್ಲಿ 97 ರನ್ ಬಾರಿಸಿದರು. ಕೂದಲೆಳೆ ಅಂತರದಲ್ಲಿ ಶತಕ ವಂಚಿತರಾದ ವೈಭವ್ ಕೇವಲ 3 ರನ್‌ಗಳಿಂದ ಐಪಿಎಲ್ ಇತಿಹಾಸದಲ್ಲಿ ಅತಿ ವೇಗದ ಶತಕವನ್ನು ತಪ್ಪಿಸಿಕೊಂಡರು. ವೈಭವ್ ಈ ಶತಕವನ್ನು ಪೂರೈಸಿದ್ದರೆ, ಅದು ಐಪಿಎಲ್ ಇತಿಹಾಸದಲ್ಲಿ ಅತ್ಯಂತ ವೇಗದ ಶತಕವಾಗುತ್ತಿತ್ತು. ಈ ಮೂಲಕ ವೈಭವ್ ಕ್ರಿಸ್ ಗೇಲ್ ಅವರ ದಾಖಲೆಯನ್ನು ಮುರಿಯುತ್ತಿದ್ದರು. 2013 ರ ಐಪಿಎಲ್‌ನಲ್ಲಿ ಕ್ರಿಸ್ ಗೇಲ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೇವಲ 30 ಎಸೆತಗಳಲ್ಲಿ ಶತಕ ಬಾರಿಸಿದ್ದರು. ವೈಭವ್ ಕೇವಲ 29 ಎಸೆತಗಳಲ್ಲಿ ಈ ದಾಖಲೆ ಮುರಿಯುವುದರಲ್ಲಿದ್ದರು. ಆದರೆ ಅದು ಆಗಲಿಲ್ಲ. ಆದಾಗ್ಯೂ ಶತಕದ ವಿಚಾರದಲ್ಲಿ ವೈಭವ್, ಗೇಲ್ ಅವರ ದಾಖಲೆ ಮುರಿಯಲು ಸಾಧ್ಯವಾಗದಿದ್ದರೂ, ಸಿಕ್ಸರ್‌ಗಳ ವಿಚಾರದಲ್ಲಿ ಗೇಲ್ ಅವರ ದಾಖಲೆ ಮುರಿದರು.
ವಾಸ್ತವವಾಗಿ ಒಂದು ಐಪಿಎಲ್‌ನಲ್ಲಿ ಸೀಸನ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆ ಇದುವರೆಗೆ ಕ್ರಿಸ್ ಗೇಲ್ ಅವರ ಹೆಸರಿನಲ್ಲಿತ್ತು. 2012 ರ ಐಪಿಎಲ್‌ನಲ್ಲಿ ಕ್ರಿಸ್ ಗೇಲ್ ಬರೋಬ್ಬರಿ 59 ಸಿಕ್ಸರ್‌ಗಳನ್ನು ಬಾರಿಸಿ ಈ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದರು. ಆದರೆ 2026 ರ ಐಪಿಎಲ್‌ನಲ್ಲಿ ವೈಭವ್ 60 ಕ್ಕೂ ಅಧಿಕ ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಒಂದು ಆವೃತ್ತಿಯಲ್ಲಿ ಅಧಿಕ ಸಿಕ್ಸರ್ ಬಾರಿಸಿದ ಆಟಗಾರನೆಂಬ ದಾಖಲೆಯನ್ನು ತಮ್ಮದಾಗಿಸಿಕೊಂಡರು.
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ


