10 ರನ್‌ಗಳಿಂದ ದ್ವಿಶತಕ ವಂಚಿತರಾದ ವೈಭವ್ ಆರ್ಭಟದ ಇನ್ನಿಂಗ್ಸ್ ಹೇಗಿತ್ತು ನೋಡಿ
Vaibhav Suryavanshi's 190: 2025-26ರ ವಿಜಯ್ ಹಜಾರೆ ಟ್ರೋಫಿಯಲ್ಲಿ ಬಿಹಾರದ ಉಪನಾಯಕ ವೈಭವ್ ಸೂರ್ಯವಂಶಿ ಅರುಣಾಚಲ ಪ್ರದೇಶ ವಿರುದ್ಧ 84 ಎಸೆತಗಳಲ್ಲಿ 190 ರನ್ ಸಿಡಿಸಿ ಅಬ್ಬರಿಸಿದ್ದಾರೆ. ಇದು ಅವರ ಲಿಸ್ಟ್ ಎ ವೃತ್ತಿಜೀವನದ ಅತ್ಯಧಿಕ ಸ್ಕೋರ್ ಹಾಗೂ ಮೊದಲ ಶತಕವಾಗಿದೆ. ಕೇವಲ 10 ರನ್‌ಗಳಿಂದ ದ್ವಿಶತಕ ವಂಚಿತರಾದರೂ, ಅವರ ಸ್ಫೋಟಕ ಬ್ಯಾಟಿಂಗ್ ಪ್ರಮುಖಾಂಶವಾಗಿದೆ.
2025-26ರ ವಿಜಯ್ ಹಜಾರೆ ಟ್ರೋಫಿಯಲ್ಲಿ ಬಿಹಾರ ತಂಡದ ಉಪನಾಯಕನಾಗಿರುವ ವೈಭವ್ ಸೂರ್ಯವಂಶಿ ಅರುಣಾಚಲ ಪ್ರದೇಶ ವಿರುದ್ಧದ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ಮಾಡಿದ್ದಾರೆ. ಈ ಮೂಲಕ ತಮ್ಮ ಲಿಸ್ಟ್ ಎ ವೃತ್ತಿಜೀವನದ ಅತ್ಯಧಿಕ ಸ್ಕೋರ್ ಕೂಡ ದಾಖಲಿಸಿದ್ದಾರೆ. ಅರುಣಾಚಲ ವಿರುದ್ಧದ ಪಂದ್ಯದಲ್ಲಿ ಎಂದಿನಂತೆ ಆರಂಭಿಕನಾಗಿ ಕಣಕ್ಕಿಳಿದಿದ್ದ ವೈಭವ್ ಸೂರ್ಯವಂಶಿ ಕೇವಲ 84 ಎಸೆತಗಳಲ್ಲಿ 190 ರನ್ಗಳ ಇನ್ನಿಂಗ್ಸ್ ಆಡಿದರು. 226 ಕ್ಕೂ ಹೆಚ್ಚು ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ವೈಭವ್ ತಮ್ಮ ಇನ್ನಿಂಗ್ಸ್‌ನಲ್ಲಿ 15 ಸಿಕ್ಸರ್‌ಗಳು ಮತ್ತು 16 ಬೌಂಡರಿಗಳನ್ನು ಬಾರಿಸಿದರು. ಆದಾಗ್ಯೂ ಕೇವಲ 10 ರನ್ಗಳ ಅಂತರದಿಂದ ದ್ವಿಶತಕ ವಂಚಿತರಾದರು. ವಿಜಯ್ ಹಜಾರೆ ಟ್ರೋಫಿ ಅಥವಾ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಇದು ವೈಭವ್ ಸೂರ್ಯವಂಶಿ ಅವರ ಮೊದಲ ಶತಕವಾಗಿದ್ದು, ಲಿಸ್ಟ್ ಎ ವೃತ್ತಿಜೀವನದಲ್ಲಿ ಅವರ ಅತ್ಯಧಿಕ ಸ್ಕೋರ್ ಕೂಡ ಆಗಿದೆ.