AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ವೈಭವೋಪೇತ ದಾಖಲೆ ಬರೆದ ವೈಭವ್

IPL 2025: ವೈಭವೋಪೇತ ದಾಖಲೆ ಬರೆದ ವೈಭವ್

ಝಾಹಿರ್ ಯೂಸುಫ್
|

Updated on: May 21, 2025 | 12:53 PM

Share

Vaibhav Suryavanshi: ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡವು 20 ಓವರ್​ಗಳಲ್ಲಿ 187 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ವೈಭವ್ ಸೂರ್ಯವಂಶಿ (57) ಆಕರ್ಷಕ ಅರ್ಧಶತಕ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡವು 17.1 ಓವರ್​ಗಳಲ್ಲಿ 188 ರನ್ ಬಾರಿಸಿ 6 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 14 ವರ್ಷದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಈ ಬಾರಿಯ ಐಪಿಎಲ್​ನಲ್ಲಿ ಶತಕ ಹಾಗೂ ಅರ್ಧಶತಕ ಬಾರಿಸುವ ಮೂಲಕ ಎಂಬುದು ವಿಶೇಷ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಬಾರಿಸಿದ್ದ ವೈಭವ್, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ.

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ 33 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 57 ರನ್ ಬಾರಿಸಿದರು. ಈ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ 7 ಇನಿಂಗ್ಸ್​ಗಳಿಂದ ಒಟ್ಟು 252 ರನ್ ಕಲೆಹಾಕಿದ್ದಾರೆ.

ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ 18 ವರ್ಷಕ್ಕಿಂತ ಮುಂಚೆ 250 ರನ್ ಕಲೆಹಾಕಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ 18 ವರ್ಷ ತುಂಬುವ ಮುನ್ನ ಐಪಿಎಲ್​ನಲ್ಲಿ ಶತಕ ಹಾಗೂ ಅರ್ಧಶತಕ ಸಿಡಿಸಿದ ಏಕೈಕ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಈ ಮೂಲಕ ಚೊಚ್ಚಲ ಐಪಿಎಲ್ ಟೂರ್ನಿಯಲ್ಲೇ ವೈಭವ್ ಸೂರ್ಯವಂಶಿ ಭರ್ಜರಿ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡವು 20 ಓವರ್​ಗಳಲ್ಲಿ 187 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ವೈಭವ್ ಸೂರ್ಯವಂಶಿ (57) ಆಕರ್ಷಕ ಅರ್ಧಶತಕ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡವು 17.1 ಓವರ್​ಗಳಲ್ಲಿ 188 ರನ್ ಬಾರಿಸಿ 6 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿದೆ.