IPL 2025: ವೈಭವೋಪೇತ ದಾಖಲೆ ಬರೆದ ವೈಭವ್
Vaibhav Suryavanshi: ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್ಕೆ ತಂಡವು 20 ಓವರ್ಗಳಲ್ಲಿ 187 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ವೈಭವ್ ಸೂರ್ಯವಂಶಿ (57) ಆಕರ್ಷಕ ಅರ್ಧಶತಕ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡವು 17.1 ಓವರ್ಗಳಲ್ಲಿ 188 ರನ್ ಬಾರಿಸಿ 6 ವಿಕೆಟ್ಗಳ ಅಮೋಘ ಗೆಲುವು ದಾಖಲಿಸಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ 14 ವರ್ಷದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಈ ಬಾರಿಯ ಐಪಿಎಲ್ನಲ್ಲಿ ಶತಕ ಹಾಗೂ ಅರ್ಧಶತಕ ಬಾರಿಸುವ ಮೂಲಕ ಎಂಬುದು ವಿಶೇಷ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಬಾರಿಸಿದ್ದ ವೈಭವ್, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ.
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ 33 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ 57 ರನ್ ಬಾರಿಸಿದರು. ಈ ಮೂಲಕ ಈ ಬಾರಿಯ ಐಪಿಎಲ್ನಲ್ಲಿ 7 ಇನಿಂಗ್ಸ್ಗಳಿಂದ ಒಟ್ಟು 252 ರನ್ ಕಲೆಹಾಕಿದ್ದಾರೆ.
ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ 18 ವರ್ಷಕ್ಕಿಂತ ಮುಂಚೆ 250 ರನ್ ಕಲೆಹಾಕಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ 18 ವರ್ಷ ತುಂಬುವ ಮುನ್ನ ಐಪಿಎಲ್ನಲ್ಲಿ ಶತಕ ಹಾಗೂ ಅರ್ಧಶತಕ ಸಿಡಿಸಿದ ಏಕೈಕ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಈ ಮೂಲಕ ಚೊಚ್ಚಲ ಐಪಿಎಲ್ ಟೂರ್ನಿಯಲ್ಲೇ ವೈಭವ್ ಸೂರ್ಯವಂಶಿ ಭರ್ಜರಿ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್ಕೆ ತಂಡವು 20 ಓವರ್ಗಳಲ್ಲಿ 187 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ವೈಭವ್ ಸೂರ್ಯವಂಶಿ (57) ಆಕರ್ಷಕ ಅರ್ಧಶತಕ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡವು 17.1 ಓವರ್ಗಳಲ್ಲಿ 188 ರನ್ ಬಾರಿಸಿ 6 ವಿಕೆಟ್ಗಳ ಅಮೋಘ ಗೆಲುವು ದಾಖಲಿಸಿದೆ.