ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ; ವಿಡಿಯೋ

Updated on: May 30, 2025 | 4:49 PM

Vaibhav Suryavanshi Meets PM Modi: ಐಪಿಎಲ್ 2025 ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಶತಕ ಸಿಡಿಸಿದ 14 ವರ್ಷದ ವೈಭವ್ ಸೂರ್ಯವಂಶಿ ಅವರು ಭಾರತ ಅಂಡರ್-19 ತಂಡದಲ್ಲೂ ಸ್ಥಾನ ಪಡೆದಿದ್ದಾರೆ. ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು. ಪಾಟ್ನಾ ವಿಮಾನ ನಿಲ್ದಾಣದಲ್ಲಿ ನಡೆದ ಈ ಭೇಟಿಯ ಫೋಟೋ ಮತ್ತು ವಿಡಿಯೋವನ್ನು ಪ್ರಧಾನಿ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ವೈಭವ್ ಅವರಿಗೆ ಶುಭ ಹಾರೈಸಿದ್ದಾರೆ.

2025 ರ ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿದು ಸಿಡಿಲಬ್ಬರದ ಶತಕ ಸಿಡಿಸಿ ದಾಖಲೆ ನಿರ್ಮಿಸಿದ್ದ 14 ವರ್ಷದ ವೈಭವ್ ಸೂರ್ಯವಂಶಿ ಪ್ರಸ್ತುತ ಕ್ರಿಕೆಟ್ ಲೋಕದ ಮನೆ ಮಾತಾಗಿದ್ದಾರೆ. ಐಪಿಎಲ್ ಪ್ರದರ್ಶನದ ಆಧಾರದ ಮೇಲೆ ವೈಭವ್​ಗೆ ಭಾರತ 19 ವರ್ಷದೊಳಗಿನವರ ತಂಡದಲ್ಲೂ ಅವಕಾಶ ಸಿಕ್ಕಿದೆ. ಹೀಗಾಗಿ ತಂಡದೊಂದಿಗೆ ಅವರು ಇಂಗ್ಲೆಂಡ್‌ ಪ್ರವಾಸ ಮಾಡಲಿದ್ದಾರೆ. ಆದರೆ ಅದಕ್ಕೂ ಮುನ್ನ ವೈಭವ್ ಸೂರ್ಯವಂಶಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಪಾಟ್ನಾ ವಿಮಾನ ನಿಲ್ದಾಣದಲ್ಲಿ ವೈಭವ್ ಸೂರ್ಯವಂಶಿ ಅವರನ್ನು ಭೇಟಿಯಾದ ಫೋಟೋ ಹಾಗೂ ವಿಡಿಯೋವನ್ನು ಸ್ವತಃ ಪ್ರಧಾನಿ ಅವರೇ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವೈಭವ್ ಸೂರ್ಯವಂಶಿ ಅವರೊಂದಿಗಿನ ಫೋಟೋಗಳನ್ನು ಹಂಚಿಕೊಂಡಿರುವ ಪ್ರಧಾನಿ ಮೋದಿ, ಪಾಟ್ನಾ ವಿಮಾನ ನಿಲ್ದಾಣದಲ್ಲಿ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಹಾಗೂ ಅವರ ಕುಟುಂವನ್ನು ಭೇಟಿ ಮಾಡಿದೆ. ಅವರ ಕ್ರಿಕೆಟ್ ಕೌಶಲ್ಯ ಇಡೀ ದೇಶಕ್ಕೆ ಸ್ಫೂರ್ತಿ ಎಂದು ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ.

ಭಾರತ ಅಂಡರ್ 19 ತಂಡದಲ್ಲಿ ಆಯ್ಕೆಯಾಗಿರುವ ವೈಭವ್ ಸೂರ್ಯವಂಶಿ ಈಗ ಇಂಗ್ಲೆಂಡ್ ಪ್ರವಾಸಕ್ಕೆ ಹೋಗಬೇಕಾಗಿದೆ. 19 ವರ್ಷದೊಳಗಿನವರ ತಂಡದ ಇಂಗ್ಲೆಂಡ್ ಪ್ರವಾಸ ಜೂನ್ 24 ರಿಂದ ಪ್ರಾರಂಭವಾಗಲಿದೆ. ಈ ಇಂಗ್ಲೆಂಡ್ ಪ್ರವಾಸದಲ್ಲಿ ಮತ್ತು ಮುಂಬರುವ ಪಂದ್ಯಾವಳಿಗಳು ಮತ್ತು ಸರಣಿಗಳಲ್ಲಿ ಉತ್ತಮ ಪ್ರದರ್ಶನ ನೀಡಲಿ ಎಂದು ಪ್ರಧಾನಿ, ವೈಭವ್ ಸೂರ್ಯವಂಶಿ ಅವರಿಗೆ ಶುಭ ಹಾರೈಸಿದ್ದು, ವೈಭವ್ ಸೂರ್ಯವಂಶಿ ಅವರಿಗೆ ನನ್ನ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.