AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vaikunta Ekadashi: ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!

Vaikunta Ekadashi: ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!

ಭಾವನಾ ಹೆಗಡೆ
|

Updated on: Dec 30, 2025 | 8:41 AM

Share

ನಾಡಿನೆಲ್ಲೆಡೆ ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದೆ. ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿರುವ ಟಿಟಿಡಿ ವೆಂಕಟೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ಸಾವಿರಾರು ಭಕ್ತರು ದರ್ಶನ ಪಡೆಯುತ್ತಿದ್ದಾರೆ. ಈ ವರ್ಷ ಎರಡು ಬಾರಿ ವೈಕುಂಠ ಏಕಾದಶಿ ಬಂದಿದ್ದು, ಭಕ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ. ತಿರುಪತಿ ತಿರುಮಲಕ್ಕೆ ಹೋಗಲು ಸಾಧ್ಯವಾಗದ ಭಕ್ತರಿಗಾಗಿ ಈ ದೇಗುಲವು ತಿರುಪತಿಯ ಅನುಭವವನ್ನು ನೀಡುತ್ತಿದೆ.

ಬೆಂಗಳೂರು, ಡಿಸೆಂಬರ್ 30: ನಾಡಿನೆಲ್ಲೆಡೆ ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದೆ. ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿರುವ ಟಿಟಿಡಿ ವೆಂಕಟೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ಸಾವಿರಾರು ಭಕ್ತರು ದರ್ಶನ ಪಡೆಯುತ್ತಿದ್ದಾರೆ. ಈ ವರ್ಷ ಎರಡು ಬಾರಿ ವೈಕುಂಠ ಏಕಾದಶಿ ಬಂದಿದ್ದು, ಭಕ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ. ತಿರುಪತಿ ತಿರುಮಲಕ್ಕೆ ಹೋಗಲು ಸಾಧ್ಯವಾಗದ ಭಕ್ತರಿಗಾಗಿ ಈ ದೇಗುಲವು ತಿರುಪತಿಯ ಅನುಭವವನ್ನು ನೀಡುತ್ತಿದೆ. ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಭಕ್ತರು ದರ್ಶನ ಪಡೆಯುವ ನಿರೀಕ್ಷೆಯಿದ್ದು, ದೇವಸ್ಥಾನವನ್ನು ಹೂವುಗಳಿಂದ ಅಲಂಕರಿಸಲಾಗಿದೆ. ದರ್ಶನಕ್ಕಾಗಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದ್ದು, ವಯೋವೃದ್ಧರು ಮತ್ತು ವಿಐಪಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಸಾಮಾನ್ಯ ಭಕ್ತರಿಗೆ ಬೆಳಗ್ಗೆ 3:30 ರಿಂದ ರಾತ್ರಿ 9 ಗಂಟೆಯವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.