Vaikuntha Ekadashi: ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ

Vaikuntha Ekadashi: ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: Ganapathi Sharma

Updated on: Jan 10, 2025 | 10:00 AM

ಕರ್ನಾಟಕದಾದ್ಯಂತ ವೈಕುಂಠ ಏಕಾದಶಿ ಸಂಭ್ರಮ ಮುಗಿಲುಮುಟ್ಟಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ನಾಡಿನ ವಿವಿಧ ವೆಂಕಟರಮಣಸ್ವಾಮಿ ದೇವಸ್ಥಾನಗಳಲ್ಲಿ ವಿಶೇಷ ಅಲಂಕಾರ ಮಾಡಲಾಗಿದ್ದು, ವಿಶೇಷ ಪೂಜೆಗಳು ನೆರವೇರುತ್ತಿವೆ. ಮುಂಜಾನೆಯಿಂದಲೇ ದೇಗುಗಳಿಗೆ ಭಕ್ತರ ದಂಡೇ ಹರಿದುಬರುತ್ತಿದೆ. ಕೋಲಾರದ ಚಿಕ್ಕತಿರುಪತಿಯಲ್ಲೂ ವೈಕುಂಠ ಏಕಾದಶಿ ಆಚರಣೆ ಜೋರಾಗಿದೆ. ವಿಡಿಯೋ ಇಲ್ಲಿದೆ.

ಕೋಲಾರ, ಜನವರಿ 10: ಕೋಲಾರ ಜಿಲ್ಲೆ ಮಾಲೂರು ತಾಲೂಕಿನಲ್ಲಿರುವ ಚಿಕ್ಕತಿರುಪತಿ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಸಂಭ್ರಮ ಮನೆಮಾಡಿದೆ. ದೇವಾಲಯಕ್ಕೆ ಮುಂಜಾನೆಯಿಂದಲೇ ಸಾವಿರಾರು ಸಂಖ್ಯೆಯಲ್ಲಿ ಭಕ್ತರ ದಂಡು ಹರಿದುಬಂದಿದೆ. ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ವೈಕುಂಠ ದ್ವಾರ ಪ್ರವೇಶ ಮಾಡುತ್ತಿದ್ದಾರೆ.

ಕೋಲಾರ, ಬೆಂಗಳೂರು, ಆಂಧ್ರ, ತಮಿಳುನಾಡು ಸೇರಿದಂತೆ ಹಲವೆಡೆಯಿಂದ ಭಕ್ತರು ಬರುತ್ತಿದ್ದಾರೆ. ಬಗೆ ಬಗೆ ಹೂಗಳಿಂದ ದೇವರಿಗೆ ಅಲಂಕಾರ, ಮಾಡಲಾಗಿದ್ದು, ಎಲ್ಲೆಲ್ಲೂ ಗೋವಿಂದಾ ಗೋವಿಂದಾ ಎಂಬ ನಾಮ ಸ್ಮರಣೆ ಕೇಳಿಬರುತ್ತಿದೆ. ಸಾವಿರಾರು ಭಕ್ತರು ಆಗಮಿಸುತ್ತಿರುವ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಮುಜರಾಯಿ ಇಲಾಖೆಯಿಂದ ದೇವಾಲಯದಲ್ಲಿ ಭಕ್ತರಿಗೆ ಪ್ರಸಾದ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ