ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್; ಎಷ್ಟು ಕ್ಯೂಟ್ ನೋಡಿ

Updated on: Apr 15, 2025 | 12:23 PM

ಅನುಕೂಲ್ ಹಾಗೂ ವೈಷ್ಣವಿ ಗೌಡ ಅವರು ವಿವಾಹ ಆಗುತ್ತಿದ್ದಾರೆ. ಈ ಸಂದರ್ಭದ ವಿಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿವೆ. ವೈಷ್ಣವಿ ಗೌಡ ಅವರ ಫೋಟೋಗಳು ಗಮನ ಸೆಳೆದಿವೆ. ವೈಷ್ಣವಿಗಾಗಿ ಅನುಕೂಲ್ ಅವರು ಕನ್ನಡ ಕಲಿತಿದ್ದಾರೆ .

ವೈಷ್ಣವಿ ಗೌಡ (Vaishnavi Gowda) ಅವರು ಅನುಕೂಲ್ ಮಿಶ್ರಾ ಅವರನ್ನು ವಿವಾಹ ಆಗುತ್ತಿದ್ದಾರೆ. ಏಪ್ರಿಲ್ 14ರಂದು ಅವರ ನಿಶ್ಚಿತಾರ್ಥ ಅದ್ದೂರಿಯಾಗಿ ನೆರವೇರಿದೆ. ಈ ಸಂದರ್ಭದ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗುತ್ತಿವೆ. ಈಗ ವೈಷ್ಣವಿ ಅವರೇ ವಿಡಿಯೋ ಹಂಚಿಕೊಂಡು ಹುಡುಗನ ಬಗ್ಗೆ ಮಾಹಿತಿ ನೀಡಿದ್ದಾರೆ. ಅನುಕೂಲ್​ಗೆ ಕನ್ನಡ ಬರೋದಿಲ್ಲ. ವೈಷ್ಣವಿಗಾಗಿ ಅವರೇ ಗೂಗಲ್​ನಲ್ಲಿ ಹುಡುಕಿ ಕನ್ನಡ ಕಲಿತಿದ್ದಾರೆ. ವೈಷ್ಣವಿ ಪತಿ ಏರ್​ಫೋರ್ಸ್​ನಲ್ಲಿ ಕೆಲಸ ಮಾಡುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More