ರಮೇಶ್ ಕತ್ತಿ ವಿರುದ್ಧ ವಾಲ್ಮೀಕಿ ಸಮುದಾಯದ ಪ್ರತಿಭಟನೆ; ಕತ್ತಿ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ
ವಾಲ್ಮೀಕಿ ಸಮುದಾಯದ ಬಗ್ಗೆ ರಮೇಶ್ ಕತ್ತಿ ಅವಹೇಳನಕಾರಿ ಹೇಳಿಕೆ ನೀಡಿರುವ ಹಿನ್ನೆಲೆ, ಬೆಳಗಾವಿ ಜಿಲ್ಲೆ ಗೋಕಾಕ್ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಯುತ್ತಿದೆ. ವಾಲ್ಮೀಕಿ ಸಮಾಜದ ಮುಖಂಡರ ನೇತೃತ್ವದಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಘೋಷಣೆ ಕೂಗಿ ಬೃಹತ್ ಪ್ರತಿಭಟನೆ ನಡೆಯುತ್ತಿದ್ದು, ಮಾನವ ಸರಪಳಿ ಮಾಡಿ ಟೈಯರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ. ಅಷ್ಟೇ ಅಲ್ಲದೇ ರಮೇಶ್ ಕತ್ತಿ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ತಕ್ಷಣವೇ ಅವರ ಬಂಧನ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಕೇವಲ ಬೆಳಗಾವಿ ಮಾತ್ರವಲ್ಲದೇ ಕೊಪ್ಪಳ,ರಾಯಚೂರಿನಲ್ಲೂ ಇದೇ ರೀತಿಯ ಹೋರಾಟ ನಡೆಯುತ್ತಿದೆ.
ಬೆಳಗಾವಿ, ಅಕ್ಟೋಬರ್ 20: ವಾಲ್ಮೀಕಿ ಸಮುದಾಯದ ಬಗ್ಗೆ ರಮೇಶ್ ಕತ್ತಿ ಅವಹೇಳನಕಾರಿ ಹೇಳಿಕೆ ನೀಡಿರುವ ಹಿನ್ನೆಲೆ, ಬೆಳಗಾವಿ ಜಿಲ್ಲೆ ಗೋಕಾಕ್ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆದಿದೆ. ವಾಲ್ಮೀಕಿ ಸಮಾಜದ ಮುಖಂಡರ ನೇತೃತ್ವದಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಘೋಷಣೆ ಕೂಗಿ ಬೃಹತ್ ಪ್ರತಿಭಟನೆ ನಡೆದಿದ್ದು, ಮಾನವ ಸರಪಳಿ ಮಾಡಿ ಟೈಯರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು. ಅಷ್ಟೇ ಅಲ್ಲದೇ ರಮೇಶ್ ಕತ್ತಿ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ತಕ್ಷಣವೇ ಅವರ ಬಂಧನ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಕೇವಲ ಬೆಳಗಾವಿ ಮಾತ್ರವಲ್ಲದೇ ಕೊಪ್ಪಳ, ರಾಯಚೂರಿನಲ್ಲೂ ಇದೇ ರೀತಿಯ ಹೋರಾಟ ನಡೆದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos

