ಹೊಸ ಸರ್ಕಾರದ ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಗಾಂಧಿ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
ವಾಲ್ಮೀಕಿ ಹಗರಣ ಪ್ರಕರಣ (Valmiki Scam Case) ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಆರೋಪಿ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕೆಂದು ವಿಪಕ್ಷ ಬಿಜೆಪಿ ಆಗ್ರಹಿಸುತ್ತಿದ್ದು, ಈ ಸಂಬಂಧ ರಾಜೀನಾಮೆಗೆ ಒತ್ತಾಯಿ ಈಗಾಲಗೇ ಅಧಿವೇಶನದಲ್ಲೂ ತೀವ್ರ ಪ್ರಮಾಣದಲ್ಲಿ ಪ್ರತಿಭಟನೆ ಮಾಡಿ ಗಮನಸೆಳೆದಿದ್ದು, ಇದೀಗ ರಾಯಚೂರಿನಿಂದ ಬಳ್ಳಾರಿ ತನಕ ಪಾದಯಾತ್ರೆ ಮಾಡಲು ತೀರ್ಮಾನಿಸಿದೆ. ಹೀಗಾಗಿ ನಾಗೇಂದ್ರ ಅವರು ಸಿಎಂ ಡಿಕೆ ಶಿವಕುಮಾರ್ ಭೇಟಿ ಮಾಡಿ ರಾಜೀನಾಮೆ ನೀಡುವ ಮಾತುಗಳನ್ನಾಡಿದ್ದಾರೆ. ಇದನ್ನು ಸ್ವತಃ ಸಿಎ. ಬಹಿರಂಗವಾಗಿಯೇ ಹೇಳಿದ್ದಾರೆ.
ನವದೆಹಲಿ. (ಆಗಸ್ಟ್ 26): ವಾಲ್ಮೀಕಿ ಹಗರಣ ಪ್ರಕರಣ (Valmiki Scam Case) ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಆರೋಪಿ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕೆಂದು ವಿಪಕ್ಷ ಬಿಜೆಪಿ ಆಗ್ರಹಿಸುತ್ತಿದ್ದು, ಈ ಸಂಬಂಧ ರಾಜೀನಾಮೆಗೆ ಒತ್ತಾಯಿ ಈಗಾಲಗೇ ಅಧಿವೇಶನದಲ್ಲೂ ತೀವ್ರ ಪ್ರಮಾಣದಲ್ಲಿ ಪ್ರತಿಭಟನೆ ಮಾಡಿ ಗಮನಸೆಳೆದಿದ್ದು, ಇದೀಗ ರಾಯಚೂರಿನಿಂದ ಬಳ್ಳಾರಿ ತನಕ ಪಾದಯಾತ್ರೆ ಮಾಡಲು ತೀರ್ಮಾನಿಸಿದೆ. ಹೀಗಾಗಿ ನಾಗೇಂದ್ರ ಅವರು ಸಿಎಂ ಡಿಕೆ ಶಿವಕುಮಾರ್ ಭೇಟಿ ಮಾಡಿ ರಾಜೀನಾಮೆ ನೀಡುವ ಮಾತುಗಳನ್ನಾಡಿದ್ದಾರೆ. ಇದನ್ನು ಸ್ವತಃ ಸಿಎ. ಬಹಿರಂಗವಾಗಿಯೇ ಹೇಳಿದ್ದಾರೆ.
ನವದೆಹಲಿಯಲ್ಲಿ ಇಂದು (ಆಗಸ್ಟ್ 27) ರಾಹುಲ್ ಗಾಂಧಿ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ವಿಪಕ್ಷಗಳ ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ.ಸಚಿವ ನಾಗೇಂದ್ರ ಪಕ್ಷದ ನಿಷ್ಠಾವಂತ ನಾಯಕ, ಅವರು ಪಕ್ಷಕ್ಕೆ ಆಸ್ತಿ. ನಾಗೇಂದ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಹೈಕಮಾಂಡ್ ನಾಯಕರ ಮುಂದೆ ವಾಸ್ತವಾಂಶ ಹೇಳಿದ್ದೇನೆ. ಹೈಕಮಾಂಡ್ ನಾಯಕರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಬಿ.ನಾಗೇಂದ್ರ ಪಕ್ಷದ ಹಿತಕ್ಕಾಗಿ ಎಲ್ಲ ತ್ಯಾಗಕ್ಕೂ ಸಿದ್ಧರಾಗಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಪರೋಕ್ಷವಾಗಿ ನಾಗೇಂದ್ರ ರಾಜೀನಾಮೆ ಸುಳಿವು ನೀಡಿದ್ದಾರೆ.

