ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಬಳ್ಳಾರಿಯಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಆಪ್ತ ವಿಶ್ವನಾಥ್ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿಶ್ವನಾಥ್ ಸಹೋದರನನ್ನು ಬ್ರೂಸ್‌ಪೇಟೆ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿ ಈ ದಾಳಿ ನಡೆದಿದೆ ಎನ್ನಲಾಗಿದೆ.
ಬಳ್ಳಾರಿ, ಡಿಸೆಂಬರ್ 31: ಮಾಜಿ ಸಚಿವ ಬಿ. ನಾಗೇಂದ್ರ ಅವರ ಆಪ್ತ ವಿಶ್ವನಾಥ ಮನೆ ಮೇಲೆ ಬಳ್ಳಾರಿಯಲ್ಲಿ ಸಿಬಿಐ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ಬಳ್ಳಾರಿ ನಗರದ ಬೆಂಗಳೂರು ರಸ್ತೆಯಲ್ಲಿರುವ ವಿಶ್ವನಾಥ ನಿವಾಸಕ್ಕೆ ನಾಲ್ಕು ಜನ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಮನೆ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ವಿಶ್ವನಾಥ ಮನೆಯಲ್ಲಿಲ್ಲದ ಕಾರಣ, ಅವರ ಸಹೋದರ ಮಹೇಶ್ರನ್ನು ಸಿಬಿಐ ಅಧಿಕಾರಿಗಳು ಬ್ರೂಸ್ ಪೇಟೆ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ.ಠಾಣೆಯಲ್ಲಿಯೇ ಸಿಬಿಐ ಅಧಿಕಾರಿಗಳು ವಿಶ್ವನಾಥ ಸಂಬಂಧಿತ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ. ಈ ದಾಳಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದೆ ಎನ್ನಲಾಗಿದ್ದು, ಪ್ರಕರಣದಲ್ಲಿ ವಿಶ್ವನಾಥ ಪಾತ್ರವಿದೆ ಎಂಬ ಆರೋಪದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
Latest Videos
