Live: ದೆಹಲಿಯಿಂದ ಹಿಂದಿರುಗಿದ ಬೆನ್ನಲ್ಲೇ ಸಚಿವ ಬಿ. ನಾಗೇಂದ್ರ ಮಹತ್ವದ ಸುದ್ದಿಗೋಷ್ಠಿ
ದೆಹಲಿಯಿಂದ ವಾಪಸಾದ ಸಚಿವ ಬಿ. ನಾಗೇಂದ್ರ ಅವರು ವಿಧಾನಸೌಧದಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣ ವಿಪಕ್ಷಗಳಿಂದ ರಾಜೀನಾಮೆಗೆ ಒತ್ತಡ ಹೆಚ್ಚಿರುವ ನಡುವೆ ಅವರ ಈ ಸುದ್ದಿಗೋಷ್ಠಿ ಮಹತ್ವ ಪಡೆದುಕೊಂಡಿದೆ. ಸುದ್ದಿಗೋಷ್ಠಿ ವೇಳೆ ಕೆಲ ಸಚಿವರು, ನಾಯಕರು ನಾಗೇಂದ್ರಗೆ ಸಾಥ್ ನೀಡಿದ್ದಾರೆ.
ಬೆಂಗಳೂರು, ಆಗಸ್ಟ್ 28: ಹೈಕಮಾಂಡ್ ಭೇಟಿಯಾಗಿ ಬೆಂಗಳೂರಿಗೆ ವಾಪಸಾಗಿರುವ ಸಚಿವ ಬಿ. ನಾಗೇಂದ್ರ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. ವಾಲ್ಮೀಕಿ ನಿಗಮ ಹಗರಣ ಸಂಬಂಧ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಒತ್ತಡ ಹಿನ್ನೆಲೆ ಅವರ ಈ ಸುದ್ದಿಗೋಷ್ಠಿ ಮಹತ್ವ ಪಡೆದಿದೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸುದ್ದಿಗೋಷ್ಠಿ ನಡೆದಿದ್ದು, ಸಚಿವ ಪ್ರಿಯಾಂಕ್ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ನಾಸೀರ್ ಹುಸೇನ್, ಸಿಎಂ ರಾಜಕೀಯ ಸಲಹೆಗಾರ ಜಿ.ಸಿ.ಚಂದ್ರಶೇಖರ್, ಸಣ್ಣ ನೀರಾವರಿ ಖಾತೆ ಸಚಿವ ಡಾ.ಅಜಯ್ ಸಿಂಗ್, ಸಚಿವ ರಿಜ್ವಾನ್ ಅರ್ಷದ್ ಸೇರಿ ಹಲವರು ಭಾಗಿಯಾಗಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Aug 28, 2026 06:10 PM
Follow Us

