ಗಂಟೆಗೆ 180 ಕಿ.ಮೀ ವೇಗದಲ್ಲಿ ಚಲಿಸಿದ ವಂದೇ ಭಾರತ್ ಸ್ಲೀಪರ್ ರೈಲು; ಪರೀಕ್ಷೆಯ ವಿಡಿಯೋ ಇಲ್ಲಿದೆ
ಇಂದು ರೈಲ್ವೆ ಸುರಕ್ಷತಾ ಆಯುಕ್ತರು ವಂದೇ ಭಾರತ್ ಸ್ಲೀಪರ್ ಅನ್ನು ಪರೀಕ್ಷಿಸಿದರು. ಇದು ಕೋಟಾ ನಾಗ್ಡಾ ವಿಭಾಗದ ನಡುವೆ ಗಂಟೆಗೆ 180 ಕಿ.ಮೀ ವೇಗದಲ್ಲಿ ಚಲಿಸಿತು. ಈ ರೈಲಿನೊಳಗೆ ಗ್ಲಾಸ್ನಲ್ಲಿ ನೀರನ್ನು ಇಟ್ಟು ವಿಡಿಯೋ ಚಿತ್ರೀಕರಿಸಲಾಗಿದ್ದು, ಸ್ಪೀಡ್ ವಿವರ ಕೂಡ ಈ ವಿಡಿಯೋದಲ್ಲಿ ರೆಕಾರ್ಡ್ ಆಗಿದೆ. ಈ ನೀರಿನ ಪರೀಕ್ಷೆಯು ಈ ಹೊಸ ಪೀಳಿಗೆಯ ರೈಲಿನ ತಾಂತ್ರಿಕ ವೈಶಿಷ್ಟ್ಯಗಳನ್ನು ಪ್ರದರ್ಶಿಸಿತು.
ನವದೆಹಲಿ, ಡಿಸೆಂಬರ್ 30: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಇಂದು ಸಾಮಾಜಿಕ ಮಾಧ್ಯಮದಲ್ಲಿ ಕೋಟಾ-ನಾಗ್ಡಾ ವಿಭಾಗದ ನಡುವೆ ಗಂಟೆಗೆ 180 ಕಿ.ಮೀ ವೇಗದಲ್ಲಿ ಚಲಿಸುವ ವಂದೇ ಭಾರತ್ ಸ್ಲೀಪರ್ ರೈಲಿನ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ ರೈಲಿನಲ್ಲಿ “ನೀರಿನ ಪರೀಕ್ಷೆ” ಕೂಡ ನಡೆಸಲಾಗಿದೆ. “ಇಂದು ರೈಲ್ವೆ ಸುರಕ್ಷತಾ ಆಯುಕ್ತರು ವಂದೇ ಭಾರತ್ ಸ್ಲೀಪರ್ ಅನ್ನು ಪರೀಕ್ಷಿಸಿದ್ದಾರೆ. ಇದು ಕೋಟಾ-ನಾಗ್ಡಾ ವಿಭಾಗದ ನಡುವೆ ಗಂಟೆಗೆ 180 ಕಿ.ಮೀ ವೇಗದಲ್ಲಿ ಓಡಿತು. ಈ ನೀರಿನ ಪರೀಕ್ಷೆ ವಂದೇ ಭಾರತ್ ರೈಲಿನ ತಾಂತ್ರಿಕ ವೈಶಿಷ್ಟ್ಯವನ್ನು ಪ್ರದರ್ಶಿಸುತ್ತಿದೆ” ಎಂದು ಅಶ್ವಿನಿ ವೈಷ್ಣವ್ ಎಕ್ಸ್ನಲ್ಲಿ ಪೋಸ್ಟ್‌ನಲ್ಲಿ ಬರೆದಿದ್ದಾರೆ.
“ವಂದೇ ಭಾರತ್ ಸ್ಲೀಪರ್ ರೈಲುಗಳು ಶೀಘ್ರದಲ್ಲೇ ಎಸಿ ದರ್ಜೆಯ ಪ್ರಯಾಣಿಕರಿಗಾಗಿ ಕಾರ್ಯಾಚರಣೆಗೆ ಸಿದ್ಧವಾಗಲಿವೆ. ಇದು ದೀರ್ಘ ಪ್ರಯಾಣದ ಸಮಯವನ್ನು ಇನ್ನಷ್ಟು ಅನುಕೂಲಕರವಾಗಿಸುತ್ತದೆ” ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ