AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಶಾ ಸಮಿತಿ ಸಭೆಯಲ್ಲಿ 'ವಂದೇ ಮಾತರಂ' ಜಟಾಪಟಿ: ಪೂರ್ತಿ ಚರಣ ಹಾಡುವಂತೆ ಸಂಸದ ಕಾಗೇರಿ ಪಟ್ಟು

ದಿಶಾ ಸಮಿತಿ ಸಭೆಯಲ್ಲಿ ‘ವಂದೇ ಮಾತರಂ’ ಜಟಾಪಟಿ: ಪೂರ್ತಿ ಚರಣ ಹಾಡುವಂತೆ ಸಂಸದ ಕಾಗೇರಿ ಪಟ್ಟು

ಅಶೋಕ್​ ಪೂಜಾರಿ
| Edited By: |

Updated on: Nov 25, 2026 | 1:04 PM

Share

ಕಾರವಾರದಲ್ಲಿ ನಡೆದ ಜಿಲ್ಲಾ ಮಟ್ಟಸ ದಿಶಾ ಸಮಿತಿ ಸಭೆಯಲ್ಲಿ ವಂದೇ ಮಾತರಂ ಗೀತೆ ವಿಚಾರವಾಗಿ ಜಟಾಪಟಿ ನಡೆದಿದೆ. ಎರಡು ಚರಣ ಮಾತ್ರ ಪ್ಲೇ ಆಗುತ್ತಿದ್ದಂತೆ, ಪೂರ್ತಿ ಚರಣ ಹಾಡುವಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪಟ್ಟು ಹಿಡಿದ ಪ್ರಸಂಗ ನಡೆದಿದೆ. ಹಾಡು ನಿಲ್ಲುತ್ತಿದ್ದಂತೆ ಮುಂದಿನ ಚರಣ ಹಾಡಲು ಅವರು ಮುಂದಾಗಿದ್ದು, ಅದಕ್ಕೆ ದಿಶಾ ಸಭೆಯ ನಾಮನಿರ್ದೇಶಿತ ಸದಸ್ಯರೂ ಧ್ವನಿಗೂಡಿಸಿದ್ದಾರೆ.

ಉತ್ತರ ಕನ್ನಡ, ನವೆಂಬರ್​​ 25: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದಲ್ಲಿ ಕಾರವಾರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ದಿಶಾ ಸಮಿತಿ ಸಭೆ ವೇಳೆ ವಂದೇ ಮಾತರಂ ಗೀತೆಯ ಜಟಾಪಟಿ ನಡೆದಿದೆ. ವಂದೇ ಮಾತರಂ ಗೀತೆಯ ಪೂರ್ತಿ ಚರಣ ಹಾಡುವಂತೆ ಸಂಸದ ಕಾಗೇರಿ ಒತ್ತಾಯಿಸಿದ್ದು, ಈ ಬಗ್ಗೆ ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ಜೊತೆ ಅವರು ಚರ್ಚೆ ನಡೆಸಿದ್ದರು. ಆ ಬಳಿಕವೂ ಸಭೆಯಲ್ಲಿ ವಂದೇ ಮಾತರಂ ಗೀತೆಯ ಎರಡು ಚರಣ ಮಾತ್ರ ಪ್ಲೇ ಆಗಿದ್ದು, ಹಾಡು ನಿಲ್ಲುತ್ತಿದ್ದಂತೆ ಮುಂದಿನ ಚರಣ ಹಾಡಲು ಸಂಸದ ಕಾಗೇರಿ ಮುಂದಾಗಿದ್ದಾರೆ. ಅದಕ್ಕೆ ದಿಶಾ ಸಭೆಯ ನಾಮನಿರ್ದೇಶಿತ ಸದಸ್ಯರೂ ಧ್ವನಿಗೂಡಿಸಿದ ಪ್ರಸಂಗ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಅಶೋಕ್​ ಪೂಜಾರಿ
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More