ಗ್ರಾಮ ಆಡಳಿತ ಅಧಿಕಾರಿ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ಮುಖ್ಯಾಂಶಗಳು
- ಎಸ್ಐಆರ್ ಕರ್ತವ್ಯಕ್ಕೆ ತೆರಳುತ್ತಿದ್ದಾಗ ವಿಎಒ ಭುವನಾ ದುರ್ಮರಣ
- ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಘಟನೆಯಿಂದ ಆಘಾತ
- ಮೇಲಧಿಕಾರಿಗಳ ಒತ್ತಡವೇ ಈ ದುರಂತಕ್ಕೆ ಕಾರಣ ಎಂದು ಆರೋಪ
ತುಮಕೂರು ವಿಎಒ ಭುವನಾ ಅವರ ಆಕಸ್ಮಿಕ ಸಾವು ಸರ್ಕಾರಿ ನೌಕರರ ಆಕ್ರೋಶಕ್ಕೆ ಕಾರಣವಾಗಿದೆ. ಮೇಲಧಿಕಾರಿಗಳ ಕಾರ್ಯದ ಒತ್ತಡ ಮತ್ತು ಕಿರುಕುಳದಿಂದಲೇ ಅವರು ಸಾವನ್ನಪ್ಪಿದ್ದಾರೆ ಎಂದು ನೌಕರರು ಆರೋಪಿಸಿದ್ದಾರೆ. ಮದುವೆಗೆ ಸಿದ್ಧತೆ ನಡೆಸುತ್ತಿದ್ದ ಭುವನಾ ಅವರ ಕುಟುಂಬಕ್ಕೆ ಇದು ಬರಸಿಡಿಲು ಬಡಿದಂತಾಗಿದೆ. ನೌಕರರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.
ತುಮಕೂರು, ಜುಲೈ 05: ಎಸ್ಐಆರ್ (Special Intensive Revision) ಕರ್ತವ್ಯಕ್ಕೆ ತೆರಳುತ್ತಿದ್ದಾಗ ಗೂಳೂರು ಬಳಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದ ಭುವನಾ ಅವರ ಮದುಗೆ ಕುಟುಂಬ ಸಿದ್ಧತೆ ನಡೆಸುತ್ತಿತ್ತು ಎಂಬ ವಿಚಾರವೀಗ ಬಹಿರಂಗೊಂಡಿದೆ. ಮನೆಮಗಳ ವಿವಾಹದ ಕನಸು ಕಂಡಿದ್ದ ಕುಟುಂಬಕ್ಕೆ ಘಟನೆಯಿಂದ ಬರಸಿಡಿಲು ಬಡಿದಂತಾಗಿದ್ದು, ಮತ್ತೊಂದೆಡೆ ಸರ್ಕಾರಿ ನೌಕರರ ಹೋರಾಟವೂ ತೀವ್ರಗೊಂಡಿದೆ. ತುಮಕೂರು ಡಿಸಿ ಕಚೇರಿ ಮುಂದೆ ಅಹೋರಾತ್ರಿ ಧರಣಿ ನಡೆಸಿರುವ ನೌಕರರು, ಭುವನಾ ಸಾವಿಗೆ ನ್ಯಾಯ ನೀಡುವಂತೆ ಆಗ್ರಹಿಸಿದ್ದಾರೆ. ಮೇಲಧಿಕಾರಿಗಳ ಒತ್ತಡವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿ, ಜಿಲ್ಲಾಧಿಕಾರಿಗಳ ವರ್ಗಾವಣೆಗೂ ಬಿಗಿಪಟ್ಟು ಹಿಡಿದಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jul 05, 2026 09:30 AM
Follow Us
Latest Videos
ಕಣ್ಣೀರಿಡುತ್ತಾ ಕೆಎಸ್ಆರ್ಟಿಸಿ ಬಸ್ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ

