ಗ್ರಾಮ ಆಡಳಿತ ಅಧಿಕಾರಿ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು

Edited By:

Updated on: Jul 05, 2026 | 9:35 AM

ಮುಖ್ಯಾಂಶಗಳು

  • ಎಸ್ಐಆರ್ ಕರ್ತವ್ಯಕ್ಕೆ ತೆರಳುತ್ತಿದ್ದಾಗ ವಿಎಒ ಭುವನಾ ದುರ್ಮರಣ
  • ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಘಟನೆಯಿಂದ ಆಘಾತ
  • ಮೇಲಧಿಕಾರಿಗಳ ಒತ್ತಡವೇ ಈ ದುರಂತಕ್ಕೆ ಕಾರಣ ಎಂದು ಆರೋಪ

ತುಮಕೂರು ವಿಎಒ ಭುವನಾ ಅವರ ಆಕಸ್ಮಿಕ ಸಾವು ಸರ್ಕಾರಿ ನೌಕರರ ಆಕ್ರೋಶಕ್ಕೆ ಕಾರಣವಾಗಿದೆ. ಮೇಲಧಿಕಾರಿಗಳ ಕಾರ್ಯದ ಒತ್ತಡ ಮತ್ತು ಕಿರುಕುಳದಿಂದಲೇ ಅವರು ಸಾವನ್ನಪ್ಪಿದ್ದಾರೆ ಎಂದು ನೌಕರರು ಆರೋಪಿಸಿದ್ದಾರೆ. ಮದುವೆಗೆ ಸಿದ್ಧತೆ ನಡೆಸುತ್ತಿದ್ದ ಭುವನಾ ಅವರ ಕುಟುಂಬಕ್ಕೆ ಇದು ಬರಸಿಡಿಲು ಬಡಿದಂತಾಗಿದೆ. ನೌಕರರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

ತುಮಕೂರು, ಜುಲೈ 05: ಎಸ್ಐಆರ್ (Special Intensive Revision) ಕರ್ತವ್ಯಕ್ಕೆ ತೆರಳುತ್ತಿದ್ದಾಗ ಗೂಳೂರು ಬಳಿ ನಡೆದ ಅಪಘಾತದಲ್ಲಿ  ಮೃತಪಟ್ಟಿದ್ದ ಭುವನಾ ಅವರ ಮದುಗೆ ಕುಟುಂಬ ಸಿದ್ಧತೆ ನಡೆಸುತ್ತಿತ್ತು ಎಂಬ ವಿಚಾರವೀಗ ಬಹಿರಂಗೊಂಡಿದೆ. ಮನೆಮಗಳ ವಿವಾಹದ ಕನಸು ಕಂಡಿದ್ದ ಕುಟುಂಬಕ್ಕೆ ಘಟನೆಯಿಂದ ಬರಸಿಡಿಲು ಬಡಿದಂತಾಗಿದ್ದು, ಮತ್ತೊಂದೆಡೆ ಸರ್ಕಾರಿ ನೌಕರರ ಹೋರಾಟವೂ ತೀವ್ರಗೊಂಡಿದೆ. ತುಮಕೂರು ಡಿಸಿ ಕಚೇರಿ ಮುಂದೆ ಅಹೋರಾತ್ರಿ ಧರಣಿ ನಡೆಸಿರುವ ನೌಕರರು, ಭುವನಾ ಸಾವಿಗೆ ನ್ಯಾಯ ನೀಡುವಂತೆ ಆಗ್ರಹಿಸಿದ್ದಾರೆ. ಮೇಲಧಿಕಾರಿಗಳ ಒತ್ತಡವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿ, ಜಿಲ್ಲಾಧಿಕಾರಿಗಳ ವರ್ಗಾವಣೆಗೂ ಬಿಗಿಪಟ್ಟು ಹಿಡಿದಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jul 05, 2026 09:30 AM
Loading...
Unable to load recommendations.
Follow Us
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More