ವಿಎ ಪರೀಕ್ಷೆಯಲ್ಲಿ ಅಕ್ರಮ: ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಶಂಕರ್ ಬನ್ನೂರು ವಿರುದ್ಧ ಎಫ್ಐಆರ್
ವಿಎ ಪರೀಕ್ಷೆಯಲ್ಲಿ ಮೊಬೈಲ್ ಬಳಸಿ ನಕಲು ಮಾಡಿದ ಆರೋಪದ ಮೇರೆಗೆ ಶಂಕರ್ ಬನ್ನೂರು ವಿರುದ್ಧ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪರೀಕ್ಷೆ ವೇಳೆ ಅಕ್ರಮ ನಡೆಸಿರುವ ಆರೋಪ ಕೇಳಿಬಂದಿದ್ದ ವೇಳೆ ತಾನು ಯಾವುದೇ ತನಿಖೆಗೂ ಸಿದ್ಧ ಎಂದು ಹೇಳಿಕೊಂಡಿದ್ದ ಶಂಕರ್ಗೆ ಈಗ ಸಂಕಷ್ಟ ಎದುರಾಗಿದ್ದು, ಆತ ಹೇಳಿದ್ದೆಲ್ಲವೂ ಸುಳ್ಳು ಎಂಬುದೂ ಗೊತ್ತಾಗಿದೆ ಎನ್ನಲಾಗಿದೆ.
ಹಾವೇರಿ, ನವೆಂಬರ್ 02: ವಿಎ ಪರೀಕ್ಷೆಯಲ್ಲಿ ಅಕ್ರಮ ಆರೋಪ ಸಂಬಂಧ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಶಂಕರ್ ಬನ್ನೂರು ವಿರುದ್ಧ ಎಫ್ಐಆರ್ ದಾಖಲಾಗಿದೆ. ಶಂಕರ್ ಬನ್ನೂರು ಅಕ್ಟೋಬರ್ 4ರಂದು ಗ್ರಾಮ ಲೆಕ್ಕಾಧಿಕಾರಿ ಪರೀಕ್ಷೆ ಬರೆದಿದ್ದರು. ಈ ವೇಳೆ ಮೊಬೈಲ್ ಬಳಕೆ ಮಾಡಿಕೊಂಡು ನಕಲು ಮಾಡಿದ್ದು ತನಿಖೆ ವೇಳೆ ಗೊತ್ತಾಗಿದೆ. ಕಾನ್ಸ್ಟೇಬಲ್ ಎಕ್ಸಾಂನಲ್ಲಿ 25 ಅಂಕ ಪಡೆದಿದ್ದಾತ, ವಿಎಒ ಪರೀಕ್ಷೆಯಲ್ಲಿ 151 ಅಂಕ ಪಡೆದಿದ್ದೇ ಪ್ರಕರಣ ಬಯಲಾಗಲು ಪ್ರಮುಖ ಕಾರಣವಾಗಿತ್ತು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Nov 02, 2026 12:40 PM
Follow Us

