ವಿಎ ಪರೀಕ್ಷೆಯಲ್ಲಿ ಅಕ್ರಮ: ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಶಂಕರ್ ಬನ್ನೂರು ವಿರುದ್ಧ ಎಫ್​ಐಆರ್​​

Updated on: Nov 02, 2026 | 12:41 PM

ವಿಎ ಪರೀಕ್ಷೆಯಲ್ಲಿ ಮೊಬೈಲ್ ಬಳಸಿ ನಕಲು ಮಾಡಿದ ಆರೋಪದ ಮೇರೆಗೆ ಶಂಕರ್ ಬನ್ನೂರು ವಿರುದ್ಧ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪರೀಕ್ಷೆ ವೇಳೆ ಅಕ್ರಮ ನಡೆಸಿರುವ ಆರೋಪ ಕೇಳಿಬಂದಿದ್ದ ವೇಳೆ ತಾನು ಯಾವುದೇ ತನಿಖೆಗೂ ಸಿದ್ಧ ಎಂದು ಹೇಳಿಕೊಂಡಿದ್ದ ಶಂಕರ್​​ಗೆ ಈಗ ಸಂಕಷ್ಟ ಎದುರಾಗಿದ್ದು, ಆತ ಹೇಳಿದ್ದೆಲ್ಲವೂ ಸುಳ್ಳು ಎಂಬುದೂ ಗೊತ್ತಾಗಿದೆ ಎನ್ನಲಾಗಿದೆ.

ಹಾವೇರಿ, ನವೆಂಬರ್​ 02: ವಿಎ ಪರೀಕ್ಷೆಯಲ್ಲಿ ಅಕ್ರಮ ಆರೋಪ ಸಂಬಂಧ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಶಂಕರ್ ಬನ್ನೂರು ವಿರುದ್ಧ ಎಫ್​ಐಆರ್​​ ದಾಖಲಾಗಿದೆ. ಶಂಕರ್​​ ಬನ್ನೂರು ಅಕ್ಟೋಬರ್ 4ರಂದು ಗ್ರಾಮ ಲೆಕ್ಕಾಧಿಕಾರಿ ಪರೀಕ್ಷೆ ಬರೆದಿದ್ದರು. ಈ ವೇಳೆ ಮೊಬೈಲ್​​ ಬಳಕೆ ಮಾಡಿಕೊಂಡು ನಕಲು ಮಾಡಿದ್ದು ತನಿಖೆ ವೇಳೆ ಗೊತ್ತಾಗಿದೆ. ಕಾನ್​​ಸ್ಟೇಬಲ್​ ಎಕ್ಸಾಂನಲ್ಲಿ 25 ಅಂಕ ಪಡೆದಿದ್ದಾತ, ವಿಎಒ ಪರೀಕ್ಷೆಯಲ್ಲಿ 151 ಅಂಕ ಪಡೆದಿದ್ದೇ ಪ್ರಕರಣ ಬಯಲಾಗಲು ಪ್ರಮುಖ ಕಾರಣವಾಗಿತ್ತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Nov 02, 2026 12:40 PM
Loading...
Unable to load recommendations.
Follow Us
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More