Varamahalakshmi Festival 2024: ವರಮಹಾಲಕ್ಷ್ಮಿ ಹಬ್ಬದ ಮಹತ್ವವೇನು? ಏಕೆ ಆಚರಿಸಲಾಗುತ್ತೆ

|

Updated on: Aug 15, 2024 | 6:58 AM

ವರಮಹಾಲಕ್ಷ್ಮಿ ಹಬ್ಬದಂದು ಲಕ್ಷ್ಮಿ ದೇವಿಯನ್ನು ಪೂಜಿಸಲಾಗುತ್ತದೆ. ಈ ದಿನ ವಿವಾಹಿತ ಮಹಿಳೆಯರು ತಮ್ಮ ಪತಿ ಮತ್ತು ಇತರ ಕುಟುಂಬ ಸದಸ್ಯರ ಯೋಗಕ್ಷೇಮ ಮತ್ತು ದೀರ್ಘಾಯುಷ್ಯಕ್ಕಾಗಿ ಉಪವಾಸವನ್ನು ಆಚರಿಸುತ್ತಾರೆ. ಈ ಶುಭ ದಿನದಂದು ಅಷ್ಟ ಲಕ್ಷ್ಮಿಯನ್ನು ಪೂಜಿಸುವುದು ಹಿಂದೂ ಧರ್ಮದಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದಿದೆ.

ಸಂಪತ್ತು ಮತ್ತು ಸಮೃದ್ಧಿಯ ಅಧಿದೇವತೆಯಾದ ಲಕ್ಷ್ಮಿ ದೇವಿಯನ್ನು ಪೂಜಿಸಲು ವರಮಹಾಲಕ್ಷ್ಮಿ ವ್ರತವು ಅತ್ಯಂತ ಮಂಗಳಕರ ದಿನವಾಗಿದೆ. ಈ ದಿನ ಭಕ್ತರು ವಿಶೇಷ ಪೂಜೆ ಮತ್ತು ಉಪವಾಸ ವ್ರತಗಳನ್ನು ಆಚರಿಸುತ್ತಾರೆ. ಶ್ರಾವಣ ಮಾಸದ ಶುಕ್ಲ ಪಕ್ಷದ ಏಕಾದಶಿ ತಿಥಿಯಂದು ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗುತ್ತದೆ. ಈ ವರ್ಷ, ವರಮಹಾಲಕ್ಷ್ಮಿ ವ್ರತವನ್ನು ಆಗಸ್ಟ್ 16 ರಂದು ಆಚರಿಸಲಾಗುತ್ತದೆ.

ಸಂಪತ್ತು ಮತ್ತು ಸಮೃದ್ಧಿಗೆ ಸಂಬಂಧಿಸಿದ ಲಕ್ಷ್ಮಿ ದೇವಿಯ ಅವತಾರಗಳಲ್ಲಿ ಒಂದಾದ ವರಲಕ್ಷ್ಮಿ ದೇವಿಯನ್ನು ಪೂಜಿಸಲು ಇದು ಪ್ರಮುಖ ದಿನವಾಗಿದೆ. ಪೌರಾಣಿಕ ನಂಬಿಕೆಗಳ ಪ್ರಕಾರ, ಕ್ಷೀರಸಾಗರದಿಂದ ಜನಿಸಿದ ವರಲಕ್ಷ್ಮಿಯನ್ನು ಪೂಜಿಸುವುದರಿಂದ ಸಮೃದ್ಧಿ ಹೆಚ್ಚಾಗುತ್ತದೆ ಮತ್ತು ಭಕ್ತರ ಇಷ್ಟಾರ್ಥಗಳು ಈಡೇರುತ್ತವೆ ಎನ್ನುವ ನಂಬಿಕೆಯಿದೆ. ವರಮಹಾಲಕ್ಷ್ಮಿ ಹಬ್ಬದ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಈ ವಿಡಿಯೋದಲ್ಲಿ ವಿವರಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ