Video: ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ

Updated on: Aug 21, 2026 | 8:44 AM

ರಾಜ್ಯಾದ್ಯಂತ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಮನೆಮಾಡಿದ್ದು, ತುಮಕೂರು ಜಿಲ್ಲೆಯ ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ಸಂಭ್ರಮ ಕಳೆಗಟ್ಟಿದೆ. ದೇವಾಲಯದಲ್ಲಿ ತಾಯಿ ವರಮಹಾಲಕ್ಷ್ಮಿಗೆ ವಿಶೇಷ ಪೂಜೆ, ಪಂಚಾಮೃತ ಅಭಿಷೇಕ ಹಾಗೂ ಹೂವಿನ ಅಲಂಕಾರ ಮಾಡಲಾಗಿದೆ. ಮಹಾಮಂಗಳಾರತಿಯ ಬಳಿಕ ಭಕ್ತರಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದಾರೆ.

ರಾಜ್ಯಾದ್ಯಂತ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಮನೆಮಾಡಿದ್ದು, ವಿಶೇಷವಾಗಿ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಗ್ರಾಮದಲ್ಲಿರುವ ಐತಿಹಾಸಿಕ ಮಹಾಲಕ್ಷ್ಮೀ ದೇವಾಲಯದಲ್ಲಿ ಆಚರಣೆಗಳು ಕಳೆಗಟ್ಟಿದೆ. ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ತಾಯಿ ವರಮಹಾಲಕ್ಷ್ಮೀ ದೇವಿಗೆ ಪಂಚಾಮೃತ ಅಭಿಷೇಕವನ್ನು ನೆರವೇರಿಸಲಾಯಿತು. ದೇವಿ ವಿಗ್ರಹಕ್ಕೆ ವಿವಿಧ ಬಗೆಯ ಸುಗಂಧಭರಿತ ಹೂವುಗಳಿಂದ ಸುಂದರವಾಗಿ ಅಲಂಕಾರ ಮಾಡಲಾಗಿತ್ತು. ಭಕ್ತರ ಕಣ್ಮನ ಸೆಳೆದ ಈ ಅಲಂಕಾರಗಳು ಹಬ್ಬದ ಸಡಗರವನ್ನು ಹೆಚ್ಚಿಸಿವೆ. ಬೆಳಗ್ಗೆ 7.30ಕ್ಕೆ ವರಮಹಾಲಕ್ಷ್ಮೀ ದೇವಿಗೆ ಮಹಾಮಂಗಳಾರತಿಯನ್ನು ನೆರವೇರಿಸಲಾಯಿತು.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Aug 21, 2026 08:43 AM
Loading...
Unable to load recommendations.
Follow Us
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More