ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ
ಬೆಂಗಳೂರಿನಲ್ಲಿ ವರಮಹಾಲಕ್ಷ್ಮೀ ಹಬ್ಬಕ್ಕೆ ಸಿದ್ಧತೆ ಜೋರಾಗಿದೆ. ಕೆಆರ್ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಗುರುವಾರ ಬೆಳಗ್ಗೆಯೇ ಜೋರಾಗಿದ್ದು, ಜನ ದಟ್ಟಣೆ ಹಾಗೂ ಸಂಚಾರ ದಟ್ಟಣೆ ವಿಪರೀತವಾಗಿದೆ. ಮಾರುಕಟ್ಟೆ ಫ್ಲೈಓವರ್ ಮೇಲೂ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕ್ ಮಾಡಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಯಿತು. ಮಾರುಕಟ್ಟೆಯ ಜನಜಂಗುಳಿಯ ವಿಡಿಯೋ ಇಲ್ಲಿದೆ.
ಬೆಂಗಳೂರು, ಆಗಸ್ಟ್ 7: ಶುಕ್ರವಾರ ವರಮಹಾಲಕ್ಷ್ಮೀ ಹಬ್ಬ ಇರುವುದರಿಂದ ಬೆಂಗಳೂರಿನ ಕೆಆರ್ ಮಾರುಕಟ್ಟೆಯಲ್ಲಿ ಗುರುವಾರ ಬೆಳಗ್ಗೆಯಿಂದಲೇ ಖರೀದಿ ಭರಾಟೆ ಜೋರಾಗಿದೆ. ಮಾರುಕಟ್ಟೆಯಲ್ಲಿ ಹೂವು, ಹಣ್ಣು, ಪೂಜಾ ಸಾಮಗ್ರಿ ಖರೀದಿ ಹೆಚ್ಚಾಗಿದೆ. ಜನದಟ್ಟಣೆ ಹೆಚ್ಚಾದ ಕಾರಣ ಕೆಆರ್ ಮಾರುಕಟ್ಟೆ ಸುತ್ತಮುತ್ತ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಾಯಿತು.
ಮಾರುಕಟ್ಟೆ ಫ್ಲೈಓವರ್, ಕಲಾಸಿಪಾಳ್ಯ ರಸ್ತೆ, ಟೌನ್ಹಾಲ್, ಕಾರ್ಪೋರೇಷನ್, ಮೈಸೂರು ರಸ್ತೆ, ಜೆಸಿ.ರಸ್ತೆ, ಚಾಮರಾಜಪೇಟೆ ಸೇರಿದಂತೆ ಮಾರುಕಟ್ಟೆಗೆ ಸಂಪರ್ಕ ಕಲ್ಲಿಸುವ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು.
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
