Video: ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಶ್ರೀರಂಗಪಟ್ಟಣದ ಚಾಮುಂಡೇಶ್ವರಿ ದೇವಾಲಯದಲ್ಲಿ ನೋಟುಗಳಿಂದ ಧನಲಕ್ಷ್ಮಿ ಅಲಂಕಾರ ಮಾಡಲಾಗಿದೆ. 10 ರೂ.ನಿಂದ 500 ರೂ.ವರೆಗಿನ ಸುಮಾರು ಮೂರು ಲಕ್ಷ ರೂಪಾಯಿ ಮೌಲ್ಯದ ನೋಟುಗಳನ್ನು ಬಳಸಿ ದೇವಿಯನ್ನು ಅಲಂಕರಿಸಲಾಗಿದೆ. ಮುಖ್ಯ ಅರ್ಚಕ ಲಕ್ಷ್ಮೀಶ್ ಶರ್ಮ ಎಲ್ಲರಿಗೂ ಶುಭವಾಗಲಿ ಎಂದು ಪ್ರಾರ್ಥಿಸಿದರು. ಭಕ್ತರಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಶ್ರೀರಂಗಪಟ್ಟಣದ ಪ್ರಸಿದ್ಧ ಚಾಮುಂಡೇಶ್ವರಿ ದೇವಾಲಯದಲ್ಲಿ ಈ ವರ್ಷವೂ ಭಕ್ತಾದಿಗಳಿಗೆ ವಿಶೇಷ ಧನಲಕ್ಷ್ಮಿ ಅಲಂಕಾರದ ದರ್ಶನವನ್ನು ಏರ್ಪಡಿಸಲಾಗಿದೆ. ದೇವಿಗೆ ವಿವಿಧ ಮುಖಬೆಲೆಯ ನೋಟುಗಳನ್ನು ಬಳಸಿ ಅಲಂಕಾರ ಮಾಡಲಾಗಿದ್ದು, ಇದು ಭಕ್ತರ ಗಮನ ಸೆಳೆದಿದೆ. ದೇವಾಲಯಕ್ಕೆ ಭಕ್ತಾದಿಗಳಿಂದ ಹರಿದು ಬಂದ 10, 20, 50, 100, 200, ಮತ್ತು 500 ರೂಪಾಯಿ ನೋಟುಗಳನ್ನು ಸಂಗ್ರಹಿಸಿ, ಸುಮಾರು ಮೂರು ಲಕ್ಷ ರೂಪಾಯಿ ಮೌಲ್ಯದ ಧನಲಕ್ಷ್ಮಿ ಅಲಂಕಾರವನ್ನು ಕೈಗೊಳ್ಳಲಾಗಿದೆ.
ದೇವಾಲಯದ ಪ್ರಧಾನ ಅರ್ಚಕರಾದ ಲಕ್ಷ್ಮೀಶ್ ಶರ್ಮ ಅವರು ಮಾತನಾಡಿ, ಪ್ರತಿ ವರ್ಷದಂತೆ ಈ ಬಾರಿಯೂ ವರಮಹಾಲಕ್ಷ್ಮಿ ಹಬ್ಬದ ದಿನದಂದು ದೇವಿಗೆ ಈ ಅಲಂಕಾರ ಮಾಡಲಾಗಿದೆ. ಈ ಅಲಂಕಾರದ ಮೂಲಕ ಎಲ್ಲರಿಗೂ ಶುಭವಾಗಲಿ, ಕಾಲಕಾಲಕ್ಕೆ ಮಳೆಯಾಗಿ ದೇಶ ಸಮೃದ್ಧಿ ಹೊಂದಲಿ ಹಾಗೂ ತಾಯಿಯನ್ನು ಪೂಜಿಸುವ ಪ್ರತಿಯೊಬ್ಬ ಭಕ್ತನಿಗೂ ಭಗವಂತ ಒಳಿತನ್ನು ಕರುಣಿಸಲಿ ಎಂದು ಪ್ರಾರ್ಥಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ

