AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varthur Santhosh: ಬಿಗ್​ ಬಾಸ್​ ಮನೆಯಿಂದ ಹೊರಗೆ ಹೋಗಲು ಸಾಧ್ಯವಾಗದೇ ಬಿಕ್ಕಿಬಿಕ್ಕಿ ಅತ್ತ ವರ್ತೂರು ಸಂತೋಷ್​

Varthur Santhosh: ಬಿಗ್​ ಬಾಸ್​ ಮನೆಯಿಂದ ಹೊರಗೆ ಹೋಗಲು ಸಾಧ್ಯವಾಗದೇ ಬಿಕ್ಕಿಬಿಕ್ಕಿ ಅತ್ತ ವರ್ತೂರು ಸಂತೋಷ್​

ಮದನ್​ ಕುಮಾರ್​
|

Updated on: Nov 13, 2023 | 5:20 PM

Share

‘ನನ್ನನ್ನು ಹೊರಗೆ ಕಳಿಸಿ’ ಎಂದು ವರ್ತೂರು ಸಂತೋಷ್​ ಅವರು ಬೇಡಿಕೆ ಇಟ್ಟಿದ್ದಾರೆ. ಆದರೆ ಬಿಗ್​ ಬಾಸ್​ ಇದನ್ನು ಅಷ್ಟು ಸುಲಭವಾಗಿ ಒಪ್ಪಿಕೊಳ್ಳುತ್ತಿಲ್ಲ. ದೊಡ್ಮನೆಯಲ್ಲಿ ಅವರಿಗೆ ಪ್ರತಿ ಕ್ಷಣವೂ ಕಷ್ಟ ಆಗುತ್ತಿದೆ. ಹಾಗಾಗಿ ಅವರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಅವರನ್ನು ಸಮಾಧಾನ ಮಾಡಲು ಎಲ್ಲರೂ ಪ್ರಯತ್ನಿಸಿದ್ದಾರೆ.

ಎಲ್ಲರೂ ಬಿಗ್​ ಬಾಸ್​ (Bigg Boss Kannada) ಮನೆಯಲ್ಲಿ ಹೆಚ್ಚು ದಿನಗಳ ಕಾಲ ಉಳಿಯೋಕೆ ಬಯಸುತ್ತಾರೆ. 100 ದಿನವೂ ಪೈಪೋಟಿ ನೀಡಿ, ಫಿನಾಲೆಗೆ ತಲುಪಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಆದರೆ ಕೆಲವು ಸ್ಪರ್ಧಿಗಳು ಕಾರಣಾಂತಗಳಿಂದ ಮಧ್ಯದಲ್ಲೇ ಆಟಕ್ಕೆ ಅಂತ್ಯ ಹಾಡಲು ನಿರ್ಧರಿಸುತ್ತಾರೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ರಲ್ಲಿ (BBK 10) ವರ್ತೂರು ಸಂತೋಷ್​ ಅವರು ಆ ನಿರ್ಧಾರಕ್ಕೆ ಬಂದಿದ್ದಾರೆ. ‘ನನ್ನನ್ನು ಹೊರಗೆ ಕಳಿಸಿ’ ಎಂದು ಅವರು ಬೇಡಿಕೆ ಇಟ್ಟಿದ್ದಾರೆ. ಆದರೆ ಬಿಗ್​ ಬಾಸ್​ ಇದನ್ನು ಅಷ್ಟು ಸುಲಭವಾಗಿ ಒಪ್ಪಿಕೊಳ್ಳುತ್ತಿಲ್ಲ. ದೊಡ್ಮನೆಯಲ್ಲಿ ವರ್ತೂರು ಸಂತೋಷ್​ (Varthur Santhosh) ಅವರಿಗೆ ಪ್ರತಿ ಕ್ಷಣವೂ ಕಷ್ಟ ಆಗುತ್ತಿದೆ. ಹಾಗಾಗಿ ಅವರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಅವರನ್ನು ಸಮಾಧಾನ ಮಾಡಲು ಎಲ್ಲರೂ ಪ್ರಯತ್ನಿಸಿದ್ದಾರೆ. ಜನರಿಂದ 34 ಲಕ್ಷಕ್ಕೂ ಅಧಿಕ ಮತಗಳನ್ನು ಪಡೆದಿರುವ ವರ್ತೂರು ಸಂತೋಷ್​ ಅವರು ಆಟವನ್ನು ಅರ್ಧಕ್ಕೆ ನಿಲ್ಲಿಸಲು ತೀರ್ಮಾನಿಸಿರುವುದು ಅನೇಕರಿಗೆ ಬೇಸರ ಮೂಡಿಸಿದೆ. ಪ್ರತಿ ದಿನದ ಸಂಚಿಕೆಗಳು ‘ಕಲರ್ಸ್​ ಕನ್ನಡ’ದಲ್ಲಿ ರಾತ್ರಿ 9.30ಕ್ಕೆ ಪ್ರಸಾರ ಆಗಲಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಉಚಿತವಾಗಿ ನೋಡಬಹುದು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More