Varthur Santhosh: ಸ್ಪರ್ಧಿಗಳಿಗೆ ಹೊಡೆದು ಬಿಗ್ ಬಾಸ್ ಮನೆಯಿಂದ ಹೊರಬರಲು ವರ್ತೂರು ಸಂತೋಷ್ ಪ್ಲ್ಯಾನ್?
ಹೇಗಾದರೂ ಮಾಡಿ ತಾವು ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗಬೇಕು ಎಂದು ವರ್ತೂರು ಸಂತೋಷ್ ಅವರು ತೀರ್ಮಾನಿಸಿದ್ದಾರೆ. ಆದರೆ ಅವರ ಮನವೊಲಿಸಲು ಸಕಲ ಪ್ರಯತ್ನ ಮಾಡಲಾಗುತ್ತಿದೆ. ಹಾಗಿದ್ದರೂ ಕೂಡ ಅವರು ದೊಡ್ಮನೆ ತೊರೆಯಲು ಏನೇನೋ ಪ್ಲ್ಯಾನ್ ಮಾಡುತ್ತಿದ್ದಾರೆ. ಅವರ ಸಂಭಾಷಣೆಯ ಪ್ರೋಮೋ ಇಲ್ಲಿದೆ..
ಕಳೆದ ಎರಡು ದಿನಗಳಿಂದ ಬಿಗ್ ಬಾಸ್ ಮನೆಯಲ್ಲಿ ವರ್ತೂರು ಸಂತೋಷ್ (Varthur Santhosh) ಅವರೇ ಹೆಚ್ಚು ಹೈಲೈಟ್ ಆಗುತ್ತಿದ್ದಾರೆ. ಹೇಗಾದರೂ ಮಾಡಿ ತಾವು ಬಿಗ್ ಬಾಸ್ (Bigg Boss Kannada) ಮನೆಯಿಂದ ಹೊರಗೆ ಹೋಗಬೇಕು ಎಂದು ಅವರು ತೀರ್ಮಾನಿಸಿದ್ದಾರೆ. ಆದರೆ ಅವರ ಮನವೊಲಿಸಲು ಸಕಲ ಪ್ರಯತ್ನ ಮಾಡಲಾಗುತ್ತಿದೆ. ಹಾಗಿದ್ದರೂ ಕೂಡ ವರ್ತೂರು ಸಂತೋಷ್ ಅವರು ದೊಡ್ಮನೆ ತೊರೆಯಲು ಏನೇನೋ ಪ್ಲ್ಯಾನ್ ಮಾಡುತ್ತಿದ್ದಾರೆ. ‘ಎರಡು ದೊಡ್ಡ ಡ್ರೋನ್ ತರಿಸು. ಅದರ ಮೇಲೆ ಕಾಲಿಟ್ಟುಕೊಂಡು ಹಾರಿ ಹೋಗ್ತೀನಿ’ ಎಂದು ಪ್ರತಾಪ್ಗೆ ವರ್ತೂರು ಸಂತೋಷ್ ಹೇಳಿದ್ದಾರೆ. ಅವರಿಗೆ ತುಕಾಲಿ ಸಂತೋಷ್ (Tukali Santosh) ಕೂಡ ಒಂದಷ್ಟು ಐಡಿಯಾ ಕೊಟ್ಟಿದ್ದಾರೆ. ‘ನಿಮ್ಮನ್ನೆಲ್ಲ ಹೊಡೆದರೆ ಸಾಕು. ಅವರೇ ನನ್ನನ್ನು ಹೊರಗೆ ಕಳಿಸುತ್ತಾರೆ’ ಎಂದು ವರ್ತೂರು ಸಂತೋಷ್ ಹೇಳಿದ್ದಾರೆ. ಈ ಮೂವರ ಸಂಭಾಷಣೆ ಇರುವ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ. ‘ಜಿಯೋ ಸಿನಿಮಾ’ ಒಟಿಟಿಯಲ್ಲಿ 24 ಗಂಟೆಯೂ ಉಚಿತವಾಗಿ ಲೈವ್ ವೀಕ್ಷಿಸಬಹುದು.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Nov 13, 2023 07:57 PM
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

