‘ಅಂಥ ಮುಠಾಳ ನಾನಲ್ಲ’: ಹೆಂಡತಿ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ವರ್ತೂರು ಸಂತೋಷ್​ ಗರಂ

Updated on: Feb 08, 2024 | 2:46 PM

‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಶೋನಲ್ಲಿ ಸ್ಪರ್ಧಿಸಿ ಬಂದಿರುವ ವರ್ತೂರು ಸಂತೋಷ್​ ಅವರ ಜೀವನದಲ್ಲಿ ಕೆಲವು ವಿವಾದಗಳು ಇವೆ. ಅವರ ದಾಂಪತ್ಯದಲ್ಲಿ ಈ ಮೊದಲೇ ಬಿರುಕು ಮೂಡಿತ್ತು. ಆ ಕುರಿತು ಬಿಗ್​ ಬಾಸ್​ ಮನೆಯಲ್ಲಿ ಅವರು ಮಾತನಾಡಿದ್ದರು. ಶೋ ಮುಗಿದ ನಂತರವೂ ಆ ವಿಚಾರದ ಬಗ್ಗೆ ಮತ್ತೆ ಮತ್ತೆ ಪ್ರಶ್ನೆ ಎದುರಾಗುತ್ತಿದೆ. ಪತ್ನಿಯ ಜೊತೆಗಿನ ಕಿರಿಕ್​ ಬಗ್ಗೆ ಪ್ರಶ್ನೆ ಕೇಳಿದಾಗ ಸಂತೋಷ್​ ಖಡಕ್​ ಉತ್ತರ ನೀಡಿದ್ದಾರೆ.

ಹಳ್ಳಿಕಾರ್ ತಳಿಯ ಸಂರಕ್ಷಣೆಯಲ್ಲಿ ತೊಡಗಿಕೊಂಡಿರುವ ವರ್ತೂರು ಸಂತೋಷ್​ ಅವರು ತುಂಬ ಫೇಮಸ್​ ಆಗಿದ್ದಾರೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (Bigg Boss Kannada) ಶೋನಲ್ಲಿ ಸ್ಪರ್ಧಿಸಿದ ಬಳಿಕ ಅವರ ಜನಪ್ರಿಯತೆ ಇನ್ನಷ್ಟು ಹೆಚ್ಚಾಯಿತು. ಫಿನಾಲೆ ತನಕ ಪೈಪೋಟಿ ನೀಡಿದ್ದ ಅವರಿಗೆ ಅಪಾರ ಜನಬೆಂಬಲ ಸಿಕ್ಕಿತು. ವರ್ತೂರು ಸಂತೋಷ್​ (Varthur Santhosh) ಅವರ ಜೀವನದಲ್ಲಿ ಒಂದಷ್ಟು ವಿವಾದಗಳು ಕೂಡ ಇವೆ. ಅವರ ಸಂಸಾರದಲ್ಲಿ ಬಹಳ ಹಿಂದೆಯೇ ಬಿರುಕು ಮೂಡಿತ್ತು. ಆ ಬಗ್ಗೆ ಬಿಗ್​ ಬಾಸ್​ ಮನೆಯಲ್ಲೂ ಅವರು ಮಾತನಾಡಿದ್ದರು. ದೊಡ್ಮನೆಯಿಂದ ಹೊರಬಂದ ನಂತರವೂ ಆ ಬಗ್ಗೆ ಪದೇಪದೇ ಪ್ರಶ್ನೆ ಎದುರಾಗುತ್ತಿದೆ. ಹಳ್ಳಿಕಾರ್​ ರೇಸ್​ ಬಗ್ಗೆ ಮಾಹಿತಿ ನೀಡಲು ಕರೆದ ಸುದ್ದಿಗೋಷ್ಠಿಯಲ್ಲಿ ಪತ್ನಿ (Varthur Santhosh Wife) ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಸಂತೋಷ್​ ಗರಂ ಆಗಿದ್ದಾರೆ. ‘ಇದು ಪರ್ಸನಲ್​ ವಿಚಾರ. ಅದನ್ನು ತಂದು ಪಬ್ಲಿಕ್​ನಲ್ಲಿ ಹೇಳುವ ಮುಠಾಳ ನಾನಲ್ಲ. ಯಾರೋ ಮುಠಾಳರು ಅಂಥ ಕೆಲಸ ಮಾಡಿದ್ದಾರೆ ಎಂದರೆ ಅವರ ಮಟ್ಟಕ್ಕೆ ಇಳಿಯಲು ನಾವು ರೆಡಿ ಇಲ್ಲ. ಎಲ್ಲರ ಮನೆಯ ದೋಸೆ ಕೂಡ ತೂತು. ಕೆಲವರ ಮನೆ ಹಂಚೇ ತೂತಾಗಿರುತ್ತದೆ’ ಎಂದು ವರ್ತೂರು ಸಂತೋಷ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More