ವರ್ತೂರು-ತನಿಷಾ ಕುಪ್ಪಂಡ ಮದುವೆ ಆಗ್ತಾರಾ? ನೇರವಾಗಿ ಉತ್ತರಿಸಿದ ಸಂತೋಷ್

Edited By:

Updated on: Oct 02, 2024 | 9:16 PM

‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಕಾರ್ಯಕ್ರಮದಲ್ಲಿ ತನಿಷಾ ಕುಪ್ಪಂಡ ಮತ್ತು ವರ್ತೂರು ಸಂತೋಷ್​ ನಡುವೆ ಆತ್ಮೀಯತೆ ಬೆಳೆದಿತ್ತು. ರಿಯಾಲಿಟಿ ಶೋ ಮುಗಿದ ನಂತರವೂ ಅವರ ನಡುವಿನ ಸ್ನೇಹ ಮುಂದುವರಿದಿದೆ. ಹಾಗಾಗಿ ಅವರಿಬ್ಬರು ಮದುವೆ ಆಗಲಿ ಎಂದು ಕೆಲವು ಅಭಿಮಾನಿಗಳು ಆಸೆಪಟ್ಟಿದ್ದಾರೆ. ಆ ಕುರಿತ ಪ್ರಶ್ನೆಗೆ ವರ್ತೂರು ಸಂತೋಷ್​ ಉತ್ತರ ನೀಡಿದ್ದಾರೆ.

ವರ್ತೂರು ಸಂತೋಷ್​ ಮತ್ತು ತನಿಷಾ ಕುಪ್ಪಂಡ ಮದುವೆ ಆಗಬೇಕು ಎಂದು ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಹೇಳಿತ್ತಾ ಇರುತ್ತಾರೆ. ಆ ಬಗ್ಗೆ ವರ್ತೂರು ಸಂತೋಷ್​ ಪ್ರತಿಕ್ರಿಯೆ ನೀಡಿದ್ದಾರೆ. ‘ಜನರ ಅಭಿಪ್ರಾಯಕ್ಕೆ ನಾವು ಗೌರವ ಕೊಡಬೇಕು. ಮದುವೆ ಸಾಧ್ಯವಿಲ್ಲ. ನಮ್ಮದು ಅವಿಭಕ್ತ ಕುಟುಂಬ ಆಗಿತ್ತು. ನಮ್ಮ ಸಂಪ್ರದಾಯಗಳು ಜಾಸ್ತಿ. ಸ್ನೇಹಕ್ಕೆ ಬೆಲೆ ಕಟ್ಟೋಕೆ ಆಗಲ್ಲ. ವೈಯಕ್ತಿಕ ಜೀವನಕ್ಕೂ ಸಾರ್ವಜನಿಕ ಜೀವನಕ್ಕೂ ತುಂಬ ವ್ಯತ್ಯಾಸ ಇದೆ. ಹಿರಿಯರು ಹೇಳಿದ ತೀರ್ಮಾನಕ್ಕೆ ನಾನು ಕಟ್ಟುಬಿದ್ದಿದ್ದೇನೆ’ ಎಂದು ವರ್ತೂರು ಸಂತೋಷ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More